UAS Dharwad Recruitment 2022: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ(University of Agricultural Sciences Dharwad)ವು ಖಾಲಿ ಇರುವ 2 ಸೀನಿಯರ್ ರಿಸರ್ಚ್ ಫೆಲೋ(Senior Research Fellow) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿಜಯಪುರ(Vijayapura)ದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಡಿಸೆಂಬರ್ 19ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ |
ಹುದ್ದೆ | ಸೀನಿಯರ್ ರಿಸರ್ಚ್ ಫೆಲೋ |
ಒಟ್ಟು ಹುದ್ದೆ | 2 |
ವೇತನ | ಮಾಸಿಕ ₹ 31,000 |
ಉದ್ಯೋಗದ ಸ್ಥಳ | ವಿಜಯಪುರ |
ಶೈಕ್ಷಣಿಕ ಅರ್ಹತೆ:
ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಅಗ್ರಿಕಲ್ಚರ್ ಎಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ-ಈಗಲೇ ಅಪ್ಲೈ ಮಾಡಿ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ : 05/12/2022
ಸಂದರ್ಶನ ನಡೆಯುವ ದಿನಾಂಕ: 19/12/2022 ಬೆಳಗ್ಗೆ 10 ಗಂಟೆಗೆ
ಸಂದರ್ಶನ ನಡೆಯುವ ಸ್ಥಳ:
ಸಂದರ್ಶಕರ ಕೊಠಡಿ
ಡೀನ್ (ಅಗ್ರಿಕಲ್ಚರ್)
ಕೃಷಿ ವಿಶ್ವವಿದ್ಯಾಲಯ
ವಿಜಯಪುರ
ಕರ್ನಾಟಕ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ