PNB Recruitment 2021: SSLC ಪಾಸಾದವರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್(Punjab National Bank)ನಲ್ಲಿ ಬಂಪರ್ ಉದ್ಯೋಗಾವಕಾಶವಿದೆ. ಬ್ಯಾಂಕಿಂಗ್ ಉದ್ಯೋಗ(Job) ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಒಟ್ಟು 41 ಪಾರ್ಟ್ ಟೈಂ ಸ್ವೀಪರ್(Part-Time Sweepers) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾದವರು ಇಂದೇ ಅರ್ಜಿ ಸಲ್ಲಿಸಿ. ಡಿಸೆಂಬರ್ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.pnbindia.in ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಇದನ್ನೂ ಓದಿ: SBI Recruitment 2021: ತಿಂಗಳಿಗೆ ₹ 63,840 ಸಂಬಳ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ
ಸಂಸ್ಥೆ |
ಪಂಜಾಬ್ ನ್ಯಾಷನಲ್ ಬ್ಯಾಂಕ್ |
ಹುದ್ದೆಯ ಹೆಸರು |
ಸ್ವೀಪರ್ |
ಒಟ್ಟು ಹುದ್ದೆಗಳು |
41 |
ವಿದ್ಯಾರ್ಹತೆ |
10ನೇ ತರಗತಿ |
ಉದ್ಯೋಗದ ಸ್ಥಳ |
ಚೆನ್ನೈ |
ವೇತನ |
ನಿಯಮಾನುಸಾರ |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
06/12/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
20/12/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20/12/2021
ವಿದ್ಯಾರ್ಹತೆ:
ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಸ್ವೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ಅನುತ್ತೀರ್ಣರು ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಸ್ವೀಪರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-24 ವರ್ಷದೊಳಗಿರಬೇಕು.
ಇದನ್ನೂ ಓದಿ: Excise Recruitment 2021: ಕೇಂದ್ರ ಅಬಕಾರಿ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 81,100
ಉದ್ಯೋಗದ ಸ್ಥಳ:
ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಸ್ವೀಪರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಮಿಳುನಾಡಿನ ಚೆನ್ನೈನಲ್ಲಿ ಉದ್ಯೋಗ ನೀಡಲಾಗುತ್ತದೆ.
ವೇತನ:
ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಸ್ವೀಪರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ