ದೇಶದ ಪ್ರಮುಖ ಬ್ಯಾಂಕ್ಗಳಲ್ಲಿ ಒಂದಾದ ಪಂಜಾಬ್ ನ್ಯಾಷನಲ್ ಬ್ಯಾಂಕ್ (Punjab National Bank) ವಿವಿಧ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ಬ್ಯಾಂಕಿಂಗ್ ವಲಯದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅನೇಕ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಪಿಎನ್ಬಿಯಲ್ಲಿ ಅಧಿಕಾರಿ, ವ್ಯವಸ್ಥಾಪಕ ಹುದ್ದೆಗಳು ಸೇರಿದಂತೆ ಒಟ್ಟು 103 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 30 ಆಗಿದೆ.
ಬ್ಯಾಂಕ್ ಹೆಸರು: ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)
ಹುದ್ದೆಯ ಹೆಸರು: ಅಧಿಕಾರಿ, ವ್ಯವಸ್ಥಾಪಕ
ಹುದ್ದೆಗಳ ಸಂಖ್ಯೆ: 103
ಉದ್ಯೋಗ ಸ್ಥಳ: ಅಖಿಲ ಭಾರತ
ವೇತನ: 36000-69810 ರೂ. ಪ್ರತಿ ತಿಂಗಳು
ಹುದ್ದೆ |
ಹುದ್ದೆ ಸಂಖ್ಯೆ |
ವಿದ್ಯಾರ್ಹತೆ |
ವೇತನ |
ಅಧಿಕಾರಿ (ಅಗ್ನಿಶಾಮಕ ಸುರಕ್ಷತೆ) |
23 |
ಫೈರ್ ಟೆಕ್ನಾಲಜಿ/ಫೈರ್ ಇಂಜಿನಿಯರಿಂಗ್/ಸುರಕ್ಷತೆ ಮತ್ತು ಅಗ್ನಿಶಾಮಕ ಎಂಜಿನಿಯರಿಂಗ್ನಲ್ಲಿ ಪದವಿ, ಬಿ.ಇ ಅಥವಾ ಬಿ.ಟೆಕ್, ಪದವಿ |
36000-63840 ರೂ ಮಾಸಿಕ |
ಮ್ಯಾನೇಜರ್ (ಭದ್ರತೆ) |
80 |
ಪದವಿ |
48170-69810 ರೂ ಮಾಸಿಕ |
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ.ಪಂ ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಇದನ್ನು ಓದಿ: ಬೆಳಗಾವಿಯಲ್ಲಿದೆ ಸ್ಟೆನೋಗ್ರಾಫರ್ ಹುದ್ದೆ; ಮಾಸಿಕ 52650 ರೂವರೆಗೆ ವೇತನ
ಅರ್ಜಿ ಶುಲ್ಕ
ಪ.ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳು: 59 ರೂ.
ಇತರೆ ಅಭ್ಯರ್ಥಿಗಳು: 1003 ರೂ
ಪಾವತಿ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ
ಲಿಖಿತ, ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04 ಆಗಸ್ಟ್ 2022
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಆಗಸ್ಟ್ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್:
ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:
pnbindia.in
ಇದನ್ನು ಓದಿ: ಯಾದಗಿರಿ, ಬೆಳಗಾವಿಯಲ್ಲಿ 316 ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆ ವಿಳಾಸ
ಮುಖ್ಯ ವ್ಯವಸ್ಥಾಪಕ (ನೇಮಕಾತಿ ವಿಭಾಗ), HRD ವಿಭಾಗ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಕಾರ್ಪೊರೇಟ್ ಕಚೇರಿ, ಪ್ಲಾಟ್ ಸಂಖ್ಯೆ 4, ಸೆಕ್ಟರ್ 10, ದ್ವಾರಕಾ, ನವದೆಹಲಿ - 110075
ಅರ್ಜಿ ಸಲ್ಲಿಕೆ ಪ್ರಕ್ರಿಯೆ
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.
-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.
-ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಮೇಲ್ಕಂಡ ವಿಳಾಸಕ್ಕೆ ಅರ್ಜಿಯನ್ನು ಸ್ಪೀಡ್ ಪೋಸ್ಟ್ ಅಥವಾ ಅಂಚೆ ಮೂಲಕ ಸಲ್ಲಿಸಬೇಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ