Police Recruitment 2021: ತಿಂಗಳಿಗೆ ₹ 22,000 ಸಂಬಳ, ಡಿಪ್ಲೋಮಾ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ

ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
HP Police Recruitment 2021: ಹಿಮಾಚಲ ಪ್ರದೇಶ ಪೊಲೀಸ್ ಇಲಾಖೆ(Himachal Pradesh Police Department) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 9 ವಾರ್ಡ್​​​ಗಳಲ್ಲಿ ಮಾಜಿ ಸೈನಿಕರ ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 12ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ citizenportal.hppolice.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಹಿಮಾಚಲ ಪ್ರದೇಶ ಪೊಲೀಸ್ ಇಲಾಖೆ
ಹುದ್ದೆಯ ಹೆಸರುಮಾಜಿ ಸೈನಿಕ
ಒಟ್ಟು ಹುದ್ದೆಗಳು09
ವಿದ್ಯಾರ್ಹತೆಡಿಪ್ಲೊಮಾ
ಉದ್ಯೋಗದ ಸ್ಥಳಹಿಮಾಚಲ ಪ್ರದೇಶ
ವೇತನಮಾಸಿಕ ₹ 5,190-20,200
ಅರ್ಜಿ ಸಲ್ಲಿಕೆ ಬಗೆಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ12/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ04/12/2021ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/12/2021

ಇದನ್ನೂ ಓದಿ: Karnataka High Court Jobs: ಕರ್ನಾಟಕ ಹೈಕೋರ್ಟ್​ನಲ್ಲಿ ಖಾಲಿ ಇರುವ ಟೈಪಿಸ್ಟ್​ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಹುದ್ದೆಯ ಮಾಹಿತಿ:
ಮಾಜಿ ಸೈನಿಕ ಹುದ್ದೆ- 09 ಹುದ್ದೆಗಳು
ಸಾಮಾನ್ಯ ವರ್ಗ-06
ಒಬಿಸಿ-02
ST-01

ವಿದ್ಯಾರ್ಹತೆ
ಮಾಜಿ ಸೈನಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್​ & ಟೆಲಿಕಾಂ/ ಇನ್ಫರ್ಮೇಶನ್ ಟೆಕ್ನಾಲಜಿ / ಕಂಪ್ಯೂಟರ್​ ಸೈನ್ಸ್​​ನಲ್ಲಿ 3 ವರ್ಷಗಳ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಮಾಜಿ ಸೈನಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳ ವಯಸ್ಸು 20-25 ವರ್ಷ ಇರಬೇಕು. ಒಬಿಸಿ & ಎಸ್​ಟಿ ವರ್ಗದ ಅಭ್ಯರ್ಥಿಗಳಿಗೆ 27 ವರ್ಷ ಇರಬೇಕು.

ಇದನ್ನೂ ಓದಿ: KPSC Recruitment 2021: ತಿಂಗಳಿಗೆ ₹ 48,000 ಸಂಬಳ, SSLC ಪಾಸಾದವರಿಗೆ ಬಂಪರ್ ಉದ್ಯೋಗ

ಉದ್ಯೋಗದ ಸ್ಥಳ:
ಮಾಜಿ ಸೈನಿಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಮಾಜಿ ಸೈನಿಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 20,200 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಪೊಲೀಸ್ ನಿರ್ದೇಶಕರು
ಸಂವಹನ & ತಾಂತ್ರಿಕ ಸೇವೆ
ಹಿಮಾಚಲ ಪ್ರದೇಶ
ಖಲಿನಿ
ಶಿಮ್ಲಾ- 171002
Published by:Latha CG
First published: