• ಹೋಂ
  • »
  • ನ್ಯೂಸ್
  • »
  • Jobs
  • »
  • Post Office Jobs: 10ನೇ ತರಗತಿ ಪಾಸಾದವರಿಗೆ ಪೋಸ್ಟ್​ ಆಫೀಸ್​​ನಲ್ಲಿ ಉದ್ಯೋಗ, ತಿಂಗಳಿಗೆ ₹ 63,000 ಸಂಬಳ

Post Office Jobs: 10ನೇ ತರಗತಿ ಪಾಸಾದವರಿಗೆ ಪೋಸ್ಟ್​ ಆಫೀಸ್​​ನಲ್ಲಿ ಉದ್ಯೋಗ, ತಿಂಗಳಿಗೆ ₹ 63,000 ಸಂಬಳ

ಪೋಸ್ಟ್​ ಆಫೀಸ್

ಪೋಸ್ಟ್​ ಆಫೀಸ್

ಜನವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  • Share this:

India Post Office Recruitment 2022: ಭಾರತೀಯ ಅಂಚೆ ಇಲಾಖೆ(India Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 29 ಸ್ಟಾಫ್​ ಕಾರ್ ಡ್ರೈವರ್(Staff Car Driver) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಜನವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ www.indiapost.gov.in ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆದೆಹಲಿ ಪೋಸ್ಟಲ್ ಸರ್ಕಲ್
ಹುದ್ದೆಯ ಹೆಸರುಸ್ಟಾಫ್​ ಕಾರ್ ಡ್ರೈವರ್
ಒಟ್ಟು ಹುದ್ದೆಗಳು29
ವಿದ್ಯಾರ್ಹತೆ10ನೇ ತರಗತಿ
ವೇತನಮಾಸಿಕ ₹ 19,900-63,200
ಅರ್ಜಿ ಸಲ್ಲಿಕೆ ಬಗೆಆಫ್​ಲೈನ್​​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ17/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15/03/2022


ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.


ಇದನ್ನೂ ಓದಿ:Government Job: ಬಿ.ಕಾಂ ಆದವರಿಗೆ ಯಾದಗಿರಿಯಲ್ಲಿ ಸರ್ಕಾರಿ ಉದ್ಯೋಗ, ಈಗಲೇ Apply ಮಾಡಿ


ಅನುಭವ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡ್ರೈವಿಂಗ್ ಲೈಟ್​ ಮತ್ತು ಹೆವಿ ಮೋಟಾರ್​ ವೆಹಿಕಲ್​ನಲ್ಲಿ ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.


ವಯೋಮಿತಿ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-27 ವರ್ಷದೊಳಗಿರಬೇಕು.


ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ.


ವೇತನ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಟಾಫ್​ ಕಾರ್ ಡ್ರೈವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 19,900-63,200 ವೇತನ ನೀಡಲಾಗುತ್ತದೆ.


ಇದನ್ನೂ ಓದಿ: JOBS: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಮಂಗಳೂರು ಯೂನಿವರ್ಸಿಟಿ, ಫೆ.4ಕ್ಕೆ Walk-in-Interview


ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ


ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15/03/2022

Published by:Latha CG
First published: