India Post Recruitment 2021: ಭಾರತೀಯ ಅಂಚೆ ಇಲಾಖೆ (India Post Office) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 60 ಮಲ್ಟಿ ಟಾಸ್ಕಿಂಗ್ ಸ್ಟಾಫ್(Multi Tasking Staff), ಪೋಸ್ಟ್ಮ್ಯಾನ್(Post Man), ಪೋಸ್ಟಲ್ ಅಸಿಸ್ಟೆಂಟ್(Postal Assistant), ಸಾರ್ಟಿಂಗ್ ಅಸಿಸ್ಟೆಂಟ್(Sorting Assistant) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆಫ್ಲೈನ್(Offline-Postal) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 22ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.indiapost.gov.in ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಬಿಹಾರ್ ಪೋಸ್ಟಲ್ ಸರ್ಕಲ್ |
ಹುದ್ದೆಯ ಹೆಸರು |
ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ |
ಒಟ್ಟು ಹುದ್ದೆಗಳು |
60 |
ವಿದ್ಯಾರ್ಹತೆ |
10ನೇ ತರಗತಿ, 12ನೇ ತರಗತಿ |
ಉದ್ಯೋಗದ ಸ್ಥಳ |
ಬಿಹಾರ |
ವೇತನ |
ಮಾಸಿಕ ₹ 18,000-81,100 |
ಅರ್ಜಿ ಸಲ್ಲಿಸುವ ವಿಧಾನ |
ಆಫ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
22/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
31/12/2021 |
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 22/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/12/2021
ಅರ್ಜಿ ಶುಲ್ಕ:
ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಹುದ್ದೆಯ ಮಾಹಿತಿ:
ಮಲ್ಟಿ ಟಾಸ್ಕಿಂಗ್ ಸ್ಟಾಫ್-13
ಪೋಸ್ಟ್ಮ್ಯಾನ್-05
ಪೋಸ್ಟಲ್ ಅಸಿಸ್ಟೆಂಟ್- 31
ಸಾರ್ಟಿಂಗ್ ಅಸಿಸ್ಟೆಂಟ್-11
ಒಟ್ಟು-60 ಹುದ್ದೆಗಳು
ವಿದ್ಯಾರ್ಹತೆ:
ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ನಿಂದ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು.
ಸ್ಥಳೀಯ ಭಾಷೆಯ ಜ್ಞಾನವಿರಬೇಕು. ಕೇಳಲಾಗಿರುವ ಕ್ರೀಡಾ ಅರ್ಹತೆಯನ್ನು ಹೊಂದಿರಬೇಕು. ದ್ವಿಚಕ್ರ ವಾಹನದ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ಇದನ್ನೂ ಓದಿ: India Post Recruitment 2021: PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ; ಮಾಸಿಕ ವೇತನ ₹ 81,100
ಕ್ರೀಡಾ ಅರ್ಹತೆ:
ರಾಷ್ಟ್ರೀಯ/ಅಂತರಾಷ್ಟ್ರೀಯ ಕ್ರೀಡೆಯಲ್ಲಿ ರಾಜ್ಯ/ದೇಶವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು.
ಅಂತರ್-ಯೂನಿವರ್ಸಿಟಿ ಕ್ರೀಡಾ ಮಂಡಳಿಯು ನಡೆಸಿದ ಇಂಟರ್-ಯೂನಿವರ್ಸಿಟಿ ಟೂರ್ನಮೆಂಟ್ಸ್ನಲ್ಲಿ ತಮ್ಮ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು.
ಅಖಿಲ ಭಾರತ ಸ್ಕೂಲ್ ಗೇಮ್ಸ್ ಫೆಡರೇಶನ್ ನಡೆಸಿದ ಕ್ರೀಡಾಕೂಟದಲ್ಲಿ ರಾಜ್ಯ ಶಾಲಾ ತಂಡಗಳನ್ನು ಪ್ರತಿನಿಧಿಸಿರುವ ಕ್ರೀಡಾಪಟುಗಳು.
ರಾಷ್ಟ್ರೀಯ ಶಾರೀರಿಕ ದಕ್ಷತೆಯ ಚಾಲನೆಯ ಅಡಿಯಲ್ಲಿ ದೈಹಿಕ ದಕ್ಷತೆಯಲ್ಲಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದ ಕ್ರೀಡಾಪಟುಗಳು.
ವಯೋಮಿತಿ:
ಮಲ್ಟಿ ಟಾಸ್ಕಿಂಗ್ ಸ್ಟಾಫ್, ಪೋಸ್ಟ್ಮ್ಯಾನ್, ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಈ ಕೆಳಕಂಡ ರೀತಿಯಲ್ಲಿ ಇರಬೇಕು.
ಮಲ್ಟಿ ಟಾಸ್ಕಿಂಗ್ ಸ್ಟಾಫ್- 18-25 ವರ್ಷ
ಉಳಿದ ಹುದ್ದೆಗಳಿಗೆ-18-27 ವರ್ಷ
ವೇತನ:
ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ -ಮಾಸಿಕ ₹ 25,500-81,100
ಪೋಸ್ಟ್ಮ್ಯಾನ್- ಮಾಸಿಕ ₹ 21,700-69,100
ಮಲ್ಟಿ ಟಾಸ್ಕಿಂಗ್ ಸ್ಟಾಫ್- ಮಾಸಿಕ ₹ 18,000-56,900
ಆಯ್ಕೆ ಪ್ರಕ್ರಿಯೆ:
ಕ್ರೀಡಾ ಅರ್ಹತೆ
ಶಾರ್ಟ್ಲಿಸ್ಟಿಂಗ್
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಇದನ್ನೂ ಓದಿ: India Post Recruitment 2021:ತಿಂಗಳಿಗೆ ₹ 81,000 ಸಂಬಳ; SSLC, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ತಮ್ಮ ಇತ್ತೀಚಿನ ಪಾಸ್ಪೋರ್ಟ್ ಸೈಜಿನ ಫೋಟೋ ಜೊತೆಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಅಸಿಸ್ಟೆಂಟ್ ಡೈರೆಕ್ಟರ್
5ನೇ ಮಹಡಿ
O/o ಚೀಫ್ ಪೋಸ್ಟ್ ಮಾಸ್ಟರ್ ಜನರಲ್
ಬಿಹಾರ್ ಸರ್ಕಲ್
ಪಾಟ್ನಾ-800001
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ