• Home
  • »
  • News
  • »
  • jobs
  • »
  • Bengaluru Jobs: ಪ್ರಸಾರ ಭಾರತಿಯಲ್ಲಿ ಕನ್ಸಲ್ಟಿಂಗ್ ಎಡಿಟರ್ ಹುದ್ದೆ ಖಾಲಿ, ತಿಂಗಳಿಗೆ ₹ 1.25 ಲಕ್ಷ ಸಂಬಳ

Bengaluru Jobs: ಪ್ರಸಾರ ಭಾರತಿಯಲ್ಲಿ ಕನ್ಸಲ್ಟಿಂಗ್ ಎಡಿಟರ್ ಹುದ್ದೆ ಖಾಲಿ, ತಿಂಗಳಿಗೆ ₹ 1.25 ಲಕ್ಷ ಸಂಬಳ

ಪ್ರಸಾರ ಭಾರತಿ

ಪ್ರಸಾರ ಭಾರತಿ

ಪ್ರಸಾರ ಭಾರತಿಯಲ್ಲಿ ಕನ್ಸಲ್ಟಿಂಗ್ ಎಡಿಟರ್ ಹುದ್ದೆ ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ತಿಂಗಳಿಗೆ 1.25 ಲಕ್ಷ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಲಿಂಕ್​ನ್ನು ಇಲ್ಲಿ ನೀಡಲಾಗಿದೆ.

  • Share this:

    Prasar Bharati Recruitment 2022: ಪ್ರಸಾರ ಭಾರತಿ(Prasar Bharati) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಕನ್ಸಲ್ಟಿಂಗ್ ಎಡಿಟರ್(Consulting Editor) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ prasarbharati.gov.in ಗೆ ಭೇಟಿ ನೀಡಬಹುದು. ನವೆಂಬರ್ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಪ್ರಸಾರ ಭಾರತಿ
    ಹುದ್ದೆಯ ಹೆಸರುಕನ್ಸಲ್ಟಿಂಗ್ ಎಡಿಟರ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಸ್ನಾತಕೋತ್ತರ ಪದವಿ
    ವೇತನಮಾಸಿಕ ₹ 1,25,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ09/11/2022
    ಅರ್ಜಿ ಸಲ್ಲಿಸಲು ಕೊನೆ ದಿನ24/11/2022


    Prasar Bharati Recruitment 2022: ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಪ್ರಸಾರ ಭಾರತಿ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟಿಂಗ್ ಎಡಿಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು.


    ಇದನ್ನೂ ಓದಿ: NAL Recruitment: ಬೆಂಗಳೂರಿನಲ್ಲಿ ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ, ಮಾಸಿಕ ವೇತನ 1 ಲಕ್ಷ


    ವಯೋಮಿತಿ:
    ಪ್ರಸಾರ ಭಾರತಿ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟಿಂಗ್ ಎಡಿಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಪ್ರಸಾರ ಭಾರತಿ ನೇಮಕಾತಿ ಅಧಿಸೂಚನೆ ಪ್ರಕಾರ, ಕನ್ಸಲ್ಟಿಂಗ್ ಎಡಿಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಇದನ್ನೂ ಓದಿ: JOB ALERT: ರಿಸರ್ಚ್ ಅಸೋಸಿಯೇಟ್ ಆಗಬೇಕೆ? ಇಲ್ಲಿದೆ ಅವಕಾಶ-ಈಗಲೇ Apply ಮಾಡಿ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 24/11/2022

    Published by:Latha CG
    First published: