BEL Recruitment 2023: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharath Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಪ್ರಾಜೆಕ್ಟ್ ಎಂಜಿನಿಯರ್(Project Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಹುದ್ದೆ | ಪ್ರಾಜೆಕ್ಟ್ ಎಂಜಿನಿಯರ್ |
ಒಟ್ಟು ಹುದ್ದೆ | 14 |
ವೇತನ | ಮಾಸಿಕ ₹ 40,000-50,000 |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: SSLC, PUC ಪಾಸಾಗಿದ್ರೆ ತುಮಕೂರಿನಲ್ಲಿದೆ ಸರ್ಕಾರಿ ನೌಕರಿ- ಇಲ್ಲಿ ಅಪ್ಲೈ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 07/01/2023
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳು-472 ರೂ.
SC/ST/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ- ಶುಲ್ಕ ಇಲ್ಲ
ಪಾವತಿಸುವ ಬಗೆ- ಆನ್ಲೈನ್(ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್)
ಸಂಬಳ ಎಷ್ಟು?
ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 40,000-50,000 ಸಂಬಳ ಕೊಡಲಾಗುತ್ತದೆ.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು-32 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಇದನ್ನೂ ಓದಿ: BSNL Recruitment 2023: 11 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ BSNL- ತಿಂಗಳಿಗೆ 40,000 ಸಂಬಳ
ಉದ್ಯೋಗದ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
DGM (HR/MR,MS&ADSN)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ P.O.
ಬೆಂಗಳೂರು 560013
ಗಮನಿಸಿ: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ