Big Bazaar Recruitment 2023: ಬಿಗ್ ಬಜಾರ್ನಲ್ಲಿ (Big Bazaar) ಕೆಲಸ ಮಾಡಬೇಕೆಂಬ ಬಯಕೆ ಇದ್ದರೆ ಇಲ್ಲಿದೆ ನೋಡಿ ಒಳ್ಳೆಯ ಚಾನ್ಸ್. ಬಿಗ್ ಬಜಾರ್ ಹಲವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ(Application) ಆಹ್ವಾನಿಸಿದೆ. ಅನೇಕ ಸ್ಟೋರ್ ಮ್ಯಾನೇಜರ್, ರಿಟೈಲ್ ಎಕ್ಸಿಕ್ಯೂಟಿವ್, ರೋಮಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇವೆ. ಡಿಸೆಂಬರ್ 31, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಇಂದೇ ಅಪ್ಲೈ (Apply) ಮಾಡಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬಿಗ್ ಬಜಾರ್ |
ಹುದ್ದೆ | ಸ್ಟೋರ್ ಮ್ಯಾನೇಜರ್, ರಿಟೈಲ್ ಎಕ್ಸಿಕ್ಯೂಟಿವ್, ರೋಮಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ |
ವಿದ್ಯಾರ್ಹತೆ | 10ನೇ ತರಗತಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ |
ವಯೋಮಿತಿ | ಕನಿಷ್ಠ 18 ವರ್ಷ |
ವೇತನ | ಮಾಸಿಕ ₹ 21,570- 48,550 ರೂ. |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಡಿಸೆಂಬರ್ 31, 2023 |
ಇದನ್ನೂ ಓದಿ: Railway Jobs: ಎಂಜಿನಿಯರಿಂಗ್ ಆಗಿದ್ರೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗ- ಈಗಲೇ Apply ಮಾಡಿ
ವಿದ್ಯಾರ್ಹತೆ ಏನಿರಬೇಕು?
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯಸ್ಸಿನ ಮಿತಿ ಇಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ವೇತನ:
ಮಾಸಿಕ ₹ 21,570- 48,550 ರೂ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ.
ಇದನ್ನೂ ಓದಿ: Job Mela: ನಾಳೆ ಬೆಂಗಳೂರಿನಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ- ಆಸಕ್ತರು ಪಾಲ್ಗೊಳ್ಳಿ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಫೆಬ್ರವರಿ 1, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಡಿಸೆಂಬರ್ 31, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ