BookMyShow Recruitment 2023: ಬುಕ್ ಮೈ ಶೋ(BookMyShow)ನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದವರಿಗೆ ಇಲ್ಲೊಂದು ಒಳ್ಳೆಯ ಅವಕಾಶವಿದೆ. ಖಾಲಿ ಇರುವ ಟ್ರೈನಿ ಇಂಟರ್ನ್ಶಿಪ್(Trainee Internship) ಹುದ್ದೆಗಳನ್ನು ಭರ್ತಿ ಮಾಡಲು ಬುಕ್ ಮೈ ಶೋ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಪದವೀಧರರು(Degree Holders) ಅರ್ಜಿ ಹಾಕಬಹುದು. ಆಸಕ್ತರು ಕೂಡಲೇ ಅರ್ಜಿ ಹಾಕಿ, ಈ ಸುವರ್ಣಾವಕಾಶನ್ನು ತಮ್ಮದಾಗಿಸಿಕೊಳ್ಳಿ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬುಕ್ ಮೈ ಶೋ |
ಹುದ್ದೆ | ಟ್ರೈನಿ ಇಂಟರ್ನ್ಶಿಪ್ |
ವಿದ್ಯಾರ್ಹತೆ | ಪದವಿ |
ಉದ್ಯೋಗದ ಸ್ಥಳ | ಮುಂಬೈ |
ಅನುಭವ | ಫ್ರೆಶರ್ |
ಇದನ್ನೂ ಓದಿ: HDFC ಬ್ಯಾಂಕ್ನಲ್ಲಿ 12,552 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ- ಆಸಕ್ತರು ಈಗಲೇ ಅಪ್ಲೈ ಮಾಡಿ
ಇಂಟರ್ನ್ಶಿಪ್ ಅವಧಿ 6 ತಿಂಗಳು ಇರುತ್ತದೆ. ಟ್ರೈನಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮುಂಬೈನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಬುಕ್ ಮೈ ಶೋ ಕಂಪನಿಯು ನಿಯಮಾನುಸಾರ ಅಭ್ಯರ್ಥಿಗಳಿಗೆ ವೇತನ ನೀಡುತ್ತದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವಾಗ ಎಂದು ತಿಳಿಸಲಾಗಿಲ್ಲ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅಪ್ಲೈ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ