Jobs in KHPT: ಪ್ರಾಜೆಕ್ಟ್​ ಸೂಪರ್​ವೈಸರ್​ ಹುದ್ದೆಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

ಈಗಾಗಲೇ ಕ್ಷೇತ್ರ ನಿರ್ವಹಣೆಯಲ್ಲಿ ಕೆಲಸ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

  • Share this:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​ನಲ್ಲಿ (Karnataka Health Promotion Trust) ಪ್ರಾಜೆಕ್ಟ್​ ಸೂಪರ್​ವೈಸರ್​​ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಕ್ಷೇತ್ರ ನಿರ್ವಹಣೆಯಲ್ಲಿ ಕೆಲಸ ಮಾಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಿ. ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 15 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
    ಹುದ್ದೆಯ ಹೆಸರುಪ್ರಾಜೆಕ್ಟ್ ಮೇಲ್ವಿಚಾರಕರು
    ಹುದ್ದೆಗಳ ಸಂಖ್ಯೆ1
    ಉದ್ಯೋಗ ಸ್ಥಳಬೆಂಗಳೂರು
    ಸಂಬಳ:ಕೆಎಚ್​ಪಿಟಿ ಮಾನದಂಡಗಳ ಪ್ರಕಾರ

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ; ವೈದ್ಯಕೀಯ ಪದವೀಧರರಿಗೆ ಅವಕಾಶ

    ವಯಸ್ಸಿನ ಮಿತಿ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ಆಯ್ಕೆ ಪ್ರಕ್ರಿಯೆ
    ಅನುಭವ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ

    ಹುದ್ದೆಯ ಜವಾಬ್ದಾರಿ
    -ಜಿಲ್ಲೆಗಳಲ್ಲಿ ಯೋಜನೆಯ ಅನುಷ್ಠಾನವನ್ನು ಮುನ್ನಡೆಸಬೇಕು
    -ಜಿಲ್ಲಾ ಲೀಡ್‌ನೊಂದಿಗೆ ನಿಕಟವಾಗಿ ಕೆಲಸ ಮಾಡಿ ಮತ್ತು ಎಲ್​ಟಿಬಿಊ ಸಂಯೋಜಕರು ಮತ್ತು ಟೆಲಿ-ಕೌನ್ಸೆಲರ್‌ಗಳ ತಂಡವನ್ನು ನಿರ್ವಹಿಸಿ
    -ಮೈಕ್ರೋ ಯೋಜನೆಗಳನ್ನು ಅಭಿವೃದ್ಧಿಪಡಿಸಲು ತಂಡದೊಂದಿಗೆ ನಿಕಟವಾಗಿ ಸಂಘಟಿಸಬೇಕು
    -ಚಟುವಟಿಕೆಗಳ ತಡೆರಹಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾ ಮಟ್ಟದ ಕಾರ್ಯಕ್ರಮ ಸಿಬ್ಬಂದಿ ಮತ್ತು ಪಿಪಿಎಸ್​ಎ ಸಿಬ್ಬಂದಿಯನ್ನು ಕೋ ಆರ್ಡಿನೇಟ್​ ಮಾಡಬೇಕು
    -ರಾಜ್ಯದಲ್ಲಿ ಆಗ್ಗಿದ್ದಾಂಗೆ ಕೆಲಸದ ಹಿನ್ನಲೆ ಸಂಚಾರ ಮಾಡಲು ಸಿದ್ದರಾಗಿರಬೇಕು
    -ಈಗಾಗಲೇ ಆರೋಗ್ಯವಲದಯಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ

    ಅರ್ಜಿ ಸಲ್ಲಿಕೆ : ಇಮೇಲ್​ ಮೂಲಕ

    ಇಮೇಲ್​ ವಿಳಾಸ: jobs@khpt.org

    ಇದನ್ನು ಓದಿ: ದೂರಸಂಪರ್ಕ ಇಲಾಖೆಯಲ್ಲಿ ಡಿಗ್ರಿ ಆದವರಿಗೆ ಉದ್ಯೋಗಾವಕಾಶ; ತಿಂಗಳಿಗೆ 75 ಸಾವಿರ ರೂ ವೇತನ

    ಪ್ರಮುಖ ದಿನಾಂಕ

    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 5 ಸೆಪ್ಟೆಂಬರ್​​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 15 ಸೆಪ್ಟೆಂಬರ್​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: khpt.org

    ಅರ್ಜಿ ಸಲ್ಲಿಕೆ ಪ್ರಕ್ರಿಯೆ
    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಮೇಲಿನ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಕಳುಹಿಸಿ
    Published by:Seema R
    First published: