RITES Recruitment: ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ; ಬಿಎ, ಬಿಕಾಂ ಆದವರು ಅರ್ಜಿ ಸಲ್ಲಿಸಿ

ಈ ಅಪ್ರೆಂಟಿಸ್​ ಹುದ್ದೆಗಳನ್ನು ಒಂದು ವರ್ಷದ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು.

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸಸ್​​ನಲ್ಲಿ (Rail India Technical and Economic Services) ವಿವಿಧ ಅಪ್ರೆಂಟಿಸ್​ (Apprentice) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಮತ್ತು ತಾಂತ್ರಿಕೇತರ ಅಪ್ರೆಂಟಿಸ್​ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಒಟ್ಟು 91 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಅಪ್ರೆಂಟಿಸ್​ ಹುದ್ದೆಗೆ ಆನ್​ಲೈನ್​ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 31 ಆಗಿದೆ.

    ಈ ಅಪ್ರೆಂಟಿಸ್​ ಹುದ್ದೆಗಳನ್ನು ಒಂದು ವರ್ಷದ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಈ ಅಪ್ರೆಂಟಿಸ್​ ಅವಧಿಯಲ್ಲಿ ಅವರು ಸರ್ಕಾರದ ಅಪ್ರೆಂಟಿಸ್ ಕಾಯಿದೆ, 1961 ರ ನಿಬಂಧನೆಗಳಿಗೆ ಒಳಪಟ್ಟಿರುತ್ತಾರೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು (RITES)
    ಹುದ್ದೆಯ ಹೆಸರು: ಅಪ್ರೆಂಟಿಸ್
    ಹುದ್ದೆಗಳ ಸಂಖ್ಯೆ: 91
    ಉದ್ಯೋಗ ಸ್ಥಳ: ಅಖಿಲ ಭಾರತ
    ಸ್ಟೈಫಂಡ್: 10000-14000 ರೂ. ಪ್ರತಿ ತಿಂಗಳು



























    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆಸ್ಟೈಫಂಡ್​​
    ಗ್ರಾಜುಯೇಟ್ ಅಪ್ರೆಂಟಿಸ್72ಬಿಎ, ಬಿಕಾಂ, ಬಿಬಿಎ, ಬಿಇ, ಬಿಟೆಕ್​14 ಸಾವಿರ ರೂ ಮಾಸಿಕ
    ಡಿಪ್ಲೊಮಾ ಅಪ್ರೆಂಟಿಸ್10ಡಿಪ್ಲೊಮಾ12 ಸಾವಿರ ರೂ ಮಾಸಿಕ
    ಟ್ರೇಡ್ ಅಪ್ರೆಂಟಿಸ್9ಐಟಿಐ10 ಸಾವಿರ ರೂ ಮಾಸಿಕ

    ವಯಸ್ಸಿನ ಮಿತಿ: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳ ನೇಮಕಾತಿ ಅಧಿಸೂಚನೆಯ  ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ಇದನ್ನು ಓದಿ: ಯಾವುದೇ ವಿಷಯದಲ್ಲಿ ಡಿಗ್ರಿ ಆದವರಿಗೆ ಚಿಕ್ಕಮಗಳೂರಿನಲ್ಲಿದೆ ಕೆಲಸ; ತಿಂಗಳಿಗೆ 35,000 ರೂ ವೇತನ

    ಅರ್ಜಿ ಸಲ್ಲಿಕೆ
    ಆನ್​ಲೈನ್​

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 11 ಜುಲೈ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: rites.com

    ಇದನ್ನು ಓದಿ: ಎಸ್​ಇಒ ಎಕ್ಸ್​ಪರ್ಟ್​ ನೀವಾದ್ರೆ ಬೌನ್ಸ್​ನಲ್ಲಿದೆ ಕೆಲಸ; ಇಲ್ಲಿದೆ ವೇತನ ಸೇರಿದಂತೆ ಸಂಪೂರ್ಣ ಮಾಹಿತಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    -ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

    -ಮೇಲಿನ ಲಿಂಕ್‌ನಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ. ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: