Railway Jobs: 2422 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, SSLC ಪಾಸಾದವರು Apply ಮಾಡಿ

ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜನವರಿ 17ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
RRC CR Apprentice Recruitment 2022: ರೈಲ್ವೆ ನೇಮಕಾತಿ ಸೆಲ್, ಸೆಂಟ್ರಲ್​​ ರೈಲ್ವೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2422 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ rrccr.com ಗೆ ಭೇಟಿ ನೀಡಿ. ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜನವರಿ 17ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



































ಸಂಸ್ಥೆರೈಲ್ವೆ ನೇಮಕಾತಿ ಸೆಲ್, ಸೆಂಟ್ರಲ್​​ ರೈಲ್ವೆ
ಹುದ್ದೆಯ ಹೆಸರುಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು2422
ವಿದ್ಯಾರ್ಹತೆ10ನೇ ತರಗತಿ, 12ನೇ ತರಗತಿ
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ17/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ16/02/2022



ಇದನ್ನೂ ಓದಿ: Army Jobs: 8700 ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಆರ್ಮಿ ವೆಲ್​ಫೇರ್ ಎಜುಕೇಷನ್ ಸೊಸೈಟಿ

ಹುದ್ದೆಯ ಮಾಹಿತಿ:

ಮುಂಬೈ ಕ್ಲಸ್ಟರ್ (MMCT): 1659

ಭೂಸಾವಲ್ ಕ್ಲಸ್ಟರ್: 418

ಪುಣೆ ಕ್ಲಸ್ಟರ್: 152

ನಾಗ್ಪುರ ಕ್ಲಸ್ಟರ್: 114

ಸೋಲಾಪುರ ಕ್ಲಸ್ಟರ್: 79

ವಿದ್ಯಾರ್ಹತೆ:
ರೈಲ್ವೆ ನೇಮಕಾತಿ ಸೆಲ್, ಸೆಂಟ್ರಲ್​​ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ SSLC, ITI ಅಥವಾ ಪಿಯುಸಿ ಪಾಸಾಗಿರಬೇಕು.

ಅರ್ಜಿ ಶುಲ್ಕ:
ರೈಲ್ವೆ ನೇಮಕಾತಿ ಸೆಲ್, ಸೆಂಟ್ರಲ್​​ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ 100 ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: KPSC ನೇಮಕಾತಿ: 150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ Apply ಮಾಡಿ

ವಯೋಮಿತಿ:
ರೈಲ್ವೆ ನೇಮಕಾತಿ ಸೆಲ್, ಸೆಂಟ್ರಲ್​​ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ ಮೇಲಿನ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು ಜನವರಿ 1, 2022 ಕ್ಕೆ 24 ವರ್ಷಗಳನ್ನು ಮೀರಿರಬಾರದು. ಆದಾಗ್ಯೂ, ಸರ್ಕಾರಿ ನಿಯಮಗಳ ಪ್ರಕಾರ, ಮೀಸಲಾತಿ ವರ್ಗಕ್ಕೆ ವಯಸ್ಸಿನ ಸಡಿಲಿಕೆ ಇರುತ್ತದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಮೆಟ್ರಿಕ್ಯುಲೇಷನ್‌ನಲ್ಲಿ (ಕನಿಷ್ಠ 50% ಒಟ್ಟು ಅಂಕಗಳೊಂದಿಗೆ) + ಅಪ್ರೆಂಟಿಸ್‌ಶಿಪ್ ಮಾಡಬೇಕಾದ ಟ್ರೇಡ್‌ನಲ್ಲಿ ಐಟಿಐ ಅಂಕಗಳ ಶೇಕಡಾವಾರು ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆಯು ಮೆಟ್ರಿಕ್ಯುಲೇಷನ್ ಮತ್ತು ITI ಯಲ್ಲಿನ ಅಂಕಗಳ ಸರಳ ಸರಾಸರಿ ಆಧಾರದ ಮೇಲೆ ಇರುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/02/2022
Published by:Latha CG
First published: