RWF Recruitment 2023: ರೈಲ್ ವ್ಹೀಲ್ ಫ್ಯಾಕ್ಟರಿ(Rail Wheel Factory) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 192 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಫೆಬ್ರವರಿ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಬೆಂಗಳೂರಿನಲ್ಲಿ(Bengaluru) ಕೆಲಸ ಹುಡುಕುತ್ತಿದ್ರೆ ಇದೊಂದು ಗೋಲ್ಡನ್ ಚಾನ್ಸ್ ಆಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರೈಲ್ ವ್ಹೀಲ್ ಫ್ಯಾಕ್ಟರಿ |
ಹುದ್ದೆ | ಅಪ್ರೆಂಟಿಸ್ |
ಒಟ್ಟು ಹುದ್ದೆ | 192 |
ವಿದ್ಯಾರ್ಹತೆ | 10ನೇ ತರಗತಿ |
ವೇತನ | ಮಾಸಿಕ ₹ 12,261 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 20, 2023 |
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಎನ್ಟಿಸಿ ಪಾಸಾಗಿರಬೇಕು.
ಇದನ್ನೂ ಓದಿ: Post Office Jobs: ಯಾವ್ಯಾವ ಹುದ್ದೆಗಳು ಖಾಲಿ ಇವೆ? ಸಂಬಳ ಎಷ್ಟು? ಲಾಸ್ಟ್ ಡೇಟ್ ಯಾವಾಗ? ಇಲ್ಲಿದೆ ಮಾಹಿತಿ
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಜನವರಿ 21, 2023ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಅರ್ಜಿ ಶುಲ್ಕ:
SC/ST/PH/ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ- ಡಿಮ್ಯಾಂಡ್ ಡ್ರಾಫ್ಟ್/ IPO
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ವೇತನ:
ಫಿಟ್ಟರ್- ಮಾಸಿಕ ₹ 12,261
ಮೆಕ್ಯಾನಿಸ್ಟ್- ಮಾಸಿಕ ₹ 12,261
ಮೆಕ್ಯಾನಿಕ್ (ಮೋಟಾರ್ ವೆಹಿಕಲ್)- ಮಾಸಿಕ ₹ 12,261
ಟರ್ನರ್- ಮಾಸಿಕ ₹ 12,261
ಸಿಎನ್ಸಿ ಪ್ರೋಗ್ರಾಮಿಂಗ್ & ಆಪರೇಟರ್- ಮಾಸಿಕ ₹ 10,899
ಎಲೆಕ್ಟ್ರಿಷಿಯನ್- ಮಾಸಿಕ ₹ 12,261
ಎಲೆಕ್ಟ್ರಾನಿಕ್ ಮೆಕ್ಯಾನಿಕ್- ಮಾಸಿಕ ₹ 12,261
ಇದನ್ನೂ ಓದಿ: India Post Recruitment 2023: ಪೋಸ್ಟ್ ಆಫೀಸ್ನಲ್ಲಿ 40,889 ಹುದ್ದೆಗಳು ಖಾಲಿ- ಅಭ್ಯರ್ಥಿಗಳು ಇಲ್ಲಿ ಅರ್ಜಿ ಹಾಕಿ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸೀನಿಯರ್ ಪರ್ಸನಲ್ ಆಫೀಸರ್
ಪರ್ಸನಲ್ ಡಿಪಾರ್ಟ್ಮೆಂಟ್
ರೈಲ್ ವ್ಹೀಲ್ ಫ್ಯಾಕ್ಟರಿ
ಯಲಹಂಕ
ಬೆಂಗಳೂರು- 560064
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 20, 2023
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-28072616 ಗೆ ಕರೆ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ