• Home
  • »
  • News
  • »
  • jobs
  • »
  • Railway Jobs: ಮಧ್ಯ ರೈಲ್ವೆಯಲ್ಲಿ 20 ಹುದ್ದೆಗಳು ಖಾಲಿ, ತಿಂಗಳಿಗೆ 30,000 ಸಂಬಳ, ಎಂಜಿನಿಯರಿಂಗ್ ಆದವರು Apply ಮಾಡಿ

Railway Jobs: ಮಧ್ಯ ರೈಲ್ವೆಯಲ್ಲಿ 20 ಹುದ್ದೆಗಳು ಖಾಲಿ, ತಿಂಗಳಿಗೆ 30,000 ಸಂಬಳ, ಎಂಜಿನಿಯರಿಂಗ್ ಆದವರು Apply ಮಾಡಿ

 ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

ಫೆಬ್ರವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್(Offline)​ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾರ್ಚ್​ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  • Share this:

Central Railway Recruitment 2022: ಮಧ್ಯ ರೈಲ್ವೆ(Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್(Junior Technical Associate)​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 21ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್(Offline)​ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಾರ್ಚ್​ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ(Last Date). ಹೆಚ್ಚಿನ ಮಾಹಿತಿಗಾಗಿ cr.indianrailways.gov.in ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಮಧ್ಯ ರೈಲ್ವೆ
ಹುದ್ದೆಯ ಹೆಸರುಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್​​
ವಿದ್ಯಾರ್ಹತೆಬಿಇ, ಡಿಪ್ಲೋಮಾ, ಬಿಎಸ್ಸಿ
ಒಟ್ಟು ಹುದ್ದೆಗಳು20
ಉದ್ಯೋಗದ ಸ್ಥಳಮುಂಬೈ
ಅರ್ಜಿ ಸಲ್ಲಿಕೆ ಬಗೆಆಫ್​​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ21/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14/03/2022

ಹುದ್ದೆಯ ಮಾಹಿತಿ:
ಸಾಮಾನ್ಯ-08
ಎಸ್​ಸಿ-03
ಎಸ್​ಟಿ-02
ಒಬಿಸಿ-05
EWS-02
ಒಟ್ಟು 20 ಹುದ್ದೆಗಳು


ಇದನ್ನೂ ಓದಿ: BEL Recruitment 2022: 360 ಅಪ್ರೆಂಟಿಸ್ ಹುದ್ದೆಗಳು ಖಾಲಿ, BE, B Tech ಆದವರು ಅರ್ಜಿ ಸಲ್ಲಿಸಿ


ವಿದ್ಯಾರ್ಹತೆ:
ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ ಡಿಪ್ಲೋಮಾ/ ಬಿಎಸ್ಸಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ- 18-33 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ-18-36 ವರ್ಷ
SC/ST ಅಭ್ಯರ್ಥಿಗಳಿಗೆ- 18-38 ವರ್ಷ


ಉದ್ಯೋಗದ ಸ್ಥಳ:
ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಹಾರಾಷ್ಟ್ರದ ಮುಂಬೈನಲ್ಲಿ ಉದ್ಯೋಗ ನೀಡಲಾಗುತ್ತದೆ.


ವೇತನ:
ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ಟೆಕ್ನಿಕಲ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 25,000-30,000 ವೇತನ ನೀಡಲಾಗುತ್ತದೆ.


ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ


ಇದನ್ನೂ ಓದಿ: BSNL Recruitment 2022: ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಪ್ಲೋಮಾ ಆದವರು Apply ಮಾಡಿ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/03/2022


ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಉಪ ಮುಖ್ಯ ಸಿಬ್ಬಂದಿ ಅಧಿಕಾರಿ (ನಿರ್ಮಾಣ) ಮುಖ್ಯ ಆಡಳಿತಾಧಿಕಾರಿ ಕಚೇರಿ (ನಿರ್ಮಾಣ)
ಹೊಸ ಆಡಳಿತ ಕಟ್ಟಡ
6ನೇ ಮಹಡಿ ಅಂಜುಮನ್ ಇಸ್ಲಾಂ ಶಾಲೆಯ ಎದುರು, D.N. ರಸ್ತೆ
ಸೆಂಟ್ರಲ್ ರೈಲ್ವೆ, ಮುಂಬೈ CSTM,
ಮಹಾರಾಷ್ಟ್ರ 400001

Published by:Latha CG
First published: