BMRCL Recruitment 2023: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 68 ಎಕ್ಸಿಕ್ಯೂಟಿವ್ ಎಂಜಿನಿಯರ್, ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ. ಅಭ್ಯರ್ಥಿಗಳು ಆನ್ಲೈನ್ (Online) ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ (Last Date). ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ |
ಹುದ್ದೆ | ಎಕ್ಸಿಕ್ಯೂಟಿವ್ ಎಂಜಿನಿಯರ್, ಅಸಿಸ್ಟೆಂಟ್ ಎಂಜಿನಿಯರ್ |
ಒಟ್ಟು ಹುದ್ದೆ | 68 |
ವಿದ್ಯಾರ್ಹತೆ | ಡಿಪ್ಲೊಮಾ, ಬಿಇ/ಬಿ.ಟೆಕ್, ಬಿ.ಎಸ್ಸಿ, ಎಂ.ಎಸ್ಸಿ |
ವೇತನ | ಮಾಸಿಕ ₹ 1,40,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಏಪ್ರಿಲ್ 17, 2023 |
ಇದನ್ನೂ ಓದಿ: KITS Recruitment 2023: ಕರ್ನಾಟಕ ಸರ್ಕಾರ ಅರ್ಜಿ ಆಹ್ವಾನಿಸಿರುವ 7 ಹುದ್ದೆಗಳಿಗೆ ಈಗಲೇ ಅಪ್ಲೈ ಮಾಡಿ- 45 ಸಾವಿರ ಸಂಬಳ
ವಿದ್ಯಾರ್ಹತೆ:
ಡೆಪ್ಯುಟಿ ಚೀಫ್ ಎಂಜಿನಿಯರ್- ಡಿಪ್ಲೊಮಾ, ಬಿಇ/ಬಿ.ಟೆಕ್
ಎಕ್ಸಿಕ್ಯೂಟಿವ್ ಎಂಜಿನಿಯರ್- ಡಿಪ್ಲೊಮಾ, ಬಿಇ/ಬಿ.ಟೆಕ್, ಬಿ.ಎಸ್ಸಿ, ಎಂ.ಎಸ್ಸಿ
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- ಡಿಪ್ಲೊಮಾ, ಬಿಇ/ಬಿ.ಟೆಕ್, ಬಿ.ಎಸ್ಸಿ, ಬಿಸಿಎ
ಅಸಿಸ್ಟೆಂಟ್ ಎಂಜಿನಿಯರ್- ಡಿಪ್ಲೊಮಾ, ಬಿಇ/ಬಿ.ಟೆಕ್, ಬಿ.ಎಸ್ಸಿ, ಎಂ.ಎಸ್ಸಿ, ಬಿಸಿಎ
ವಯೋಮಿತಿ:
ಡೆಪ್ಯುಟಿ ಚೀಫ್ ಎಂಜಿನಿಯರ್- 55 ವರ್ಷ
ಎಕ್ಸಿಕ್ಯೂಟಿವ್ ಎಂಜಿನಿಯರ್- 50 ವರ್ಷ
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- 45 ವರ್ಷ
ಅಸಿಸ್ಟೆಂಟ್ ಎಂಜಿನಿಯರ್- 40 ವರ್ಷ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ: Banking Jobs: ಸೆಂಟ್ರಲ್ ಬ್ಯಾಂಕ್ನಲ್ಲಿ 5000 ಅಪ್ರೆಂಟಿಸ್ ಹುದ್ದೆಗಳ ನೇಮಕ- ಡಿಗ್ರಿ ಪಾಸಾದವರು ಅಪ್ಲೈ ಮಾಡಿ
ವೇತನ:
ಡೆಪ್ಯುಟಿ ಚೀಫ್ ಎಂಜಿನಿಯರ್- ಮಾಸಿಕ ₹ 1,40,000
ಎಕ್ಸಿಕ್ಯೂಟಿವ್ ಎಂಜಿನಿಯರ್- ಮಾಸಿಕ ₹ 85,000
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್- ಮಾಸಿಕ ₹ 65,000
ಅಸಿಸ್ಟೆಂಟ್ ಎಂಜಿನಿಯರ್- ಮಾಸಿಕ ₹ 50,000
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಪೋಸ್ಟ್/ ಆಫ್ಲೈನ್ ಮೂಲಕವೂ ಅರ್ಜಿ ಹಾಕಬಹುದು. ಅದಕ್ಕೆ ಅಭ್ಯರ್ಥಿಗಳು ಮಾಡಬೇಕಿರೋದು ಇಷ್ಟೇ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು - 560027
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 17, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ