CRIS Recruitment 2022: ರೈಲ್ವೆ ಮಾಹಿತಿ ವ್ಯವಸ್ಥೆ ಕೇಂದ್ರ(Centre for Railway Information Systems ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಎಂಜಿನಿಯರ್(Engineer), ಎಕ್ಸಿಕ್ಯೂಟಿವ್ ಎಂಜಿನಿಯರ್(Executive Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ನವೆಂಬರ್ 21ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ ಡಿಸೆಂಬರ್ 20, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ(Last Date). ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರೈಲ್ವೆ ಮಾಹಿತಿ ವ್ಯವಸ್ಥೆ ಕೇಂದ್ರ |
ಹುದ್ದೆ | ಎಂಜಿನಿಯರ್, ಎಕ್ಸಿಕ್ಯೂಟಿವ್ ಎಂಜಿನಿಯರ್ |
ಒಟ್ಟು ಹುದ್ದೆ | 24 |
ವೇತನ | ಮಾಸಿಕ 35,400 |
ಉದ್ಯೋಗದ ಸ್ಥಳ | ನವದೆಹಲಿ |
ವಯೋಮಿತಿ:
ಕನಿಷ್ಠ 22 ವರ್ಷ
ಗರಿಷ್ಠ 25 ವರ್ಷ
ವಯೋಮಿತಿ ಸಡಿಲಿಕೆ:
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ- 5 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ- 3 ವರ್ಷ
ಇದನ್ನೂ ಓದಿ: Anna University: ಅಣ್ಣಾ ವಿಶ್ವವಿದ್ಯಾಲಯದಲ್ಲಿ 23 ಟೀಚಿಂಗ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ:
ಪ್ರಾರಂಭದಲ್ಲಿ ತಿಂಗಳಿಗೆ 35,400 ರೂ. ಸಂಬಳ ಕೊಡಲಾಗುತ್ತದೆ. 7ನೇ ವೇತನ ಆಯೋಗದ ಲೆವೆಲ್ 6ರ ಅನ್ವಯ ವೇತನ ಹಾಗೂ DA ಮತ್ತಿತರ ಭತ್ಯೆಗಳನ್ನು ನೀಡಲಾಗುತ್ತದೆ.
ಅರ್ಹತೆ:
ಜೂನಿಯರ್ ಎಲೆಕ್ಟ್ರಿಕಲ್ ಎಂಜಿನಿಯರ್- ಎಲೆಕ್ಟ್ರಿಕಲ್ ಎಂಜಿನಿಯರಿಂಗ್ನಲ್ಲಿ 3 ವರ್ಷ ಡಿಪ್ಲೋಮಾ
ಜೂನಿಯರ್ ಸಿವಿಲ್ ಎಂಜಿನಿಯರಿಂಗ್- ಸಿವಿಲ್ ಎಂಜಿನಿಯರಿಂಗ್ನಲ್ಲಿ ವರ್ಷ ಡಿಪ್ಲೋಮಾ
ಎಕ್ಸಿಕ್ಯೂಟಿವ್, ಪರ್ಸನಲ್/ಅಡ್ಮಿನಿಸ್ಟ್ರೇಶನ್/HRD- ಕಲಾ/ವಾಣಿಜ್ಯ/ ವಿಜ್ಞಾನ ವಿಭಾಗದಲ್ಲಿ ಪದವಿ, ಡಿಪ್ಲೋಮಾ ಸ್ನಾತಕೋತ್ತರ ಪದವಿ, ಎಂಬಿಎ, HRD, HRMS ಫೀಲ್ಡ್ಸ್
ಎಕ್ಸಿಕ್ಯೂಟಿವ್, ಫೈನಾನ್ಸ್ & ಅಕೌಂಟ್ಸ್- ಕಾಮರ್ಸ್ನಲ್ಲಿ ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಎಂಬಿಎ ಫೈನಾನ್ಸ್
ಎಕ್ಸಿಕ್ಯೂಟಿವ್, ಪ್ರೊಸ್ಯುರೆಮೆಂಟ್- 3 ವರ್ಷ ಡಿಪ್ಲೋಮಾ, ಎಂಬಿಎ
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ಇದನ್ನೂ ಓದಿ: CPCRI Recruitment 2023: ದಕ್ಷಿಣ ಕನ್ನಡದಲ್ಲಿ ಕೆಲಸ ಖಾಲಿ ಇದೆ- ಡಿ.29ಕ್ಕೆ ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/11/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 20/12/2022
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ