IRCTC Recruitment 2023: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (The Indian Railway Catering and Tourism Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಮ್ಯಾನೇಜರ್(Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 4, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಡಿಗ್ರಿ ಪಾಸಾಗಿರುವ (Degree Pass) ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ |
ಹುದ್ದೆ | ಮ್ಯಾನೇಜರ್ |
ವಿದ್ಯಾರ್ಹತೆ | ಪದವಿ |
ವೇತನ | ಮಾಸಿಕ ₹ 60,000- 1,80,000 |
ಉದ್ಯೋಗದ ಸ್ಥಳ | ನವದೆಹಲಿ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 4, 2023 (ನಾಳೆ) |
ಇದನ್ನೂ ಓದಿ: Karnataka 2nd PUC Supplementary Exam 2023: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ವೇತನ:
ಮಾಸಿಕ ₹ 60,000- 1,80,000
ಉದ್ಯೋಗದ ಸ್ಥಳ:
ನವದೆಹಲಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 4, 2023
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಸಂದರ್ಶನ
ಇದನ್ನೂ ಓದಿ: HSBC is Hiring: ಸೀನಿಯರ್ ಸಾಫ್ಟ್ವೇರ್ ಎಂಜಿನಿಯರ್ ಹುದ್ದೆಗೆ ಅರ್ಜಿ ಹಾಕಿ- 9 ಲಕ್ಷ ಸಂಬಳ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
IRCTC ಕಾರ್ಪೊರೇಟ್ ಕಚೇರಿ/ IRCTC
ನವದೆಹಲಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ