RailTel Recruitment 2023: ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(RailTel Corporation of India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 23 ಗ್ರಾಜುಯೇಟ್/ ಡಿಪ್ಲೊಮಾ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಮೇ 16, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಸಲ್ಲಿಸಿ.
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಬ್ರಾಡ್‌ಬ್ಯಾಂಡ್ ಮತ್ತು ವಿಪಿಎನ್ ಸೇವೆಗಳನ್ನು ಒದಗಿಸುವ ಭಾರತೀಯ ಸಾರ್ವಜನಿಕ ವಲಯದ ಉದ್ಯಮವಾಗಿದೆ. ಭಾರತೀಯ ರೈಲ್ವೆಯ ರೈಲು ನಿಯಂತ್ರಣ ಕಾರ್ಯಾಚರಣೆ ಮತ್ತು ಸುರಕ್ಷತಾ ವ್ಯವಸ್ಥೆಯನ್ನು ಆಧುನೀಕರಿಸುವ ಉದ್ದೇಶದಿಂದ ಸೆಪ್ಟೆಂಬರ್ 2000 ರಲ್ಲಿ ರೈಲ್‌ಟೆಲ್ ಅನ್ನು ರಚಿಸಲಾಯಿತು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ |
ಹುದ್ದೆ | ಗ್ರಾಜುಯೇಟ್/ ಡಿಪ್ಲೊಮಾ ಎಂಜಿನಿಯರ್ |
ಒಟ್ಟು ಹುದ್ದೆ | 23 |
ವಿದ್ಯಾರ್ಹತೆ | ಬಿಇ/ಬಿ.ಟೆಕ್, ಡಿಪ್ಲೊಮಾ |
ವೇತನ | ಮಾಸಿಕ ₹ 12,000-14,000 |
ಉದ್ಯೋಗದ ಸ್ಥಳ | ಭಾರತದಲ್ಲಿ ಎಲ್ಲಿ ಬೇಕಾದರೂ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 16, 2023 |
ಇದನ್ನೂ ಓದಿ:RBI Recruitment 2023: ರಿಸರ್ವ್ ಬ್ಯಾಂಕ್ನಲ್ಲಿ ಕೆಲಸ ಖಾಲಿ ಇದೆ- ಮೇ 9 ರಿಂದ ಅರ್ಜಿ ಹಾಕಿ
ವಯೋಮಿತಿ:
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 25, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 12,000-14,000
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಇದನ್ನೂ ಓದಿ: BARC Recruitment 2023: ಭಾಭಾ ಆಟೋಮಿಕ್ ರಿಸರ್ಚ್ ಸೆಂಟರ್ನಲ್ಲಿ 4374 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 16, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ