South Central Railway Recruitment 2023: ದಕ್ಷಿಣ ಮಧ್ಯ ರೈಲ್ವೆಯು(South Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4103 ಅಪ್ರೆಂಟಿಸ್(Apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರೈಲ್ವೆ ಇಲಾಖೆಯಲ್ಲಿ(Railway Department) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅಪ್ಲೈ ಮಾಡಿ. ಜನವರಿ 29, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಹಾಕಿ.
ಅಭ್ಯರ್ಥಿಗಳು ಅರ್ಜಿ ಹಾಕುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ದಕ್ಷಿಣ ಮಧ್ಯ ರೈಲ್ವೆ |
ಹುದ್ದೆ | ಅಪ್ರೆಂಟಿಸ್ |
ಒಟ್ಟು ಹುದ್ದೆ | 4103 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ, ತೆಲಂಗಾಣ |
ಇದನ್ನೂ ಓದಿ: NHPC Recruitment 2023: ಬಿಇ/ಬಿ.ಟೆಕ್ ಪದವೀಧರರಿಗೆ ಉದ್ಯೋಗಾವಕಾಶ- ತಿಂಗಳಿಗೆ 1.60 ಲಕ್ಷ ಸಂಬಳ
ವಿದ್ಯಾರ್ಹತೆ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ/ NCVT/SCVT ಪೂರ್ಣಗೊಳಿಸಿರಬೇಕು.
ವಯೋಮಿತಿ:
ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 30, 2022ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಇರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ(NCL) ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ- 100 ರೂ.
ಪಾವತಿಸುವ ಬಗೆ- ಆನ್ಲೈನ್
ವೇತನ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ, ತೆಲಂಗಾಣದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಇದನ್ನೂ ಓದಿ: Jobs In Shivamogga: ಡಿಗ್ರಿ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ, ಶಿವಮೊಗ್ಗದಲ್ಲಿ ಕೆಲಸ
ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ವೈದ್ಯಕೀಯ ಪರೀಕ್ಷೆ
ದೈಹಿಕ ಗುಣಮಟ್ಟ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 29/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ