Rail Coach Factory Recruitment 2023: ರೈಲ್ ಕೋಚ್ ಫ್ಯಾಕ್ಟರಿ(Rail Coach Factory ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 550 ಅಪ್ರೆಂಟಿಸ್(Apprentice) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 4, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 10ನೇ ತರಗತಿ, ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ರೈಲ್ವೆ ಇಲಾಖೆಯಲ್ಲಿ (Railway Department) ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರೈಲ್ ಕೋಚ್ ಫ್ಯಾಕ್ಟರಿ |
ಹುದ್ದೆ | ಅಪ್ರೆಂಟಿಸ್ |
ಒಟ್ಟು ಹುದ್ದೆ | 550 |
ವಿದ್ಯಾರ್ಹತೆ | 10ನೇ ತರಗತಿ, ಪಿಯುಸಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಪಂಜಾಬ್ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 4, 2023 |
ಇದನ್ನೂ ಓದಿ: Bengaluru Jobs: ತಿಂಗಳಿಗೆ 2 ಲಕ್ಷ ಸಂಬಳ- ಡಿಗ್ರಿ ಪಾಸಾದವರಿಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ನಲ್ಲಿದೆ ಕೆಲಸ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಫೆಬ್ರವರಿ 7, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 4, 2023
ವಿದ್ಯಾರ್ಹತೆ:
ರೈಲ್ ಕೋಚ್ ಫ್ಯಾಕ್ಟರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಪಿಯುಸಿ ಪಾಸಾಗಿರಬೇಕು.
ಅರ್ಜಿ ಶುಲ್ಕ:
ಜನರಲ್/ಒಬಿಸಿ ಅಭ್ಯರ್ಥಿಗಳು- 100 ರೂ.
SC/ST/PWD/ ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಪಾವತಿಸುವ ಬಗೆ- ಆನ್ಲೈನ್
ಇದನ್ನೂ ಓದಿ: Banking Jobs: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ನಲ್ಲಿ ಕೆಲಸ ಖಾಲಿ ಇದೆ- ಈಗಲೇ ರೆಸ್ಯೂಮ್ ಕಳುಹಿಸಿ
ವಯೋಮಿತಿ:
ಜನರಲ್ ಅಭ್ಯರ್ಥಿಗಳು- 15ರಿಂದ 24 ವರ್ಷ
ವಯೋಮಿತಿ ಸಡಿಲಿಕೆ
SC/ST ಅಭ್ಯರ್ಥಿಗಳು - 5 ವರ್ಷ
OBC ಅಭ್ಯರ್ಥಿಗಳು- 3 ವರ್ಷ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಉದ್ಯೋಗದ ಸ್ಥಳ:
ಟೆಕ್ಲಿಮಿಕಲ್ ಟ್ರೇನಿಂಗ್ ಸೆಂಟರ್
ರೈಲ್ ಕೋಚ್ ಫ್ಯಾಕ್ಟರಿ
ಕಪುರ್ತಲಾ ಪಂಜಾಬ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ