RITES Recruitment 2023: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು(Rail India Technical and Economic Services) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 15 SHE ಎಕ್ಸ್ಪರ್ಟ್, ಸೀನಿಯರ್ ಎಂಜಿನಿಯರ್(Senior Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಜಿ ಹಾಕಲು ಜನವರಿ 06, 2023 ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮತ್ತು ಆನ್ಲೈನ್ ಎರಡರ ಮೂಲಕವೂ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು |
ಹುದ್ದೆ | SHE ಎಕ್ಸ್ಪರ್ಟ್, ಸೀನಿಯರ್ ಎಂಜಿನಿಯರ್ |
ಒಟ್ಟು ಹುದ್ದೆ | 15 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಬೆಂಗಳೂರು |
ಇದನ್ನೂ ಓದಿ: JNCASR Recruitment 2023: ತಿಂಗಳಿಗೆ 30 ಸಾವಿರ ಸಂಬಳ- ಪದವೀಧರರಿಗೆ ಇಲ್ಲಿದೆ ಬಂಪರ್ ಉದ್ಯೋಗ
ವಿದ್ಯಾರ್ಹತೆ:
ರೆಸಿಡೆಂಟ್ ಎಂಜಿನಿಯರ್, ಸೀನಿಯರ್ ಎಂಜಿನಿಯರ್, ಕ್ವಾಲಿಟಿ ಕಂಟ್ರೋಲ್/ಮೆಟಿರಿಯಲ್ಸ್ ಎಂಜಿನಿಯರ್- ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ
ಸೇಫ್ಟಿ ಹೆಲ್ತ್ & ಎನ್ವಿರಾನ್ಮೆಂಟ್ (SHE) ಎಕ್ಸ್ಪರ್ಟ್- ಎಂಜಿನಿಯರಿಂಗ್ ಪದವಿ, ಸೇಫ್ಟಿ ವಿಭಾಗದಲ್ಲಿ ಎಂಎ, ಎಂಎಸ್ಸಿ
ಪ್ಲ್ಯಾನಿಂಗ್ ಎಂಜಿನಿಯರ್(ಗ್ರೇಡ್-1)- ಎಂಜಿನಿಯರಿಂಗ್ ಪದವಿ
ವಯೋಮಿತಿ:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಗರಿಷ್ಠ 63 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: EDII Recruitment 2023: ಪಿಜಿ ಕಂಪ್ಲೀಟ್ ಆಗಿದ್ರೆ ಬೆಂಗಳೂರಿನಲ್ಲಿದೆ ನೋಡಿ ಕೆಲಸ- 12 ಲಕ್ಷದವರೆಗೆ ಸಂಬಳದ ಪ್ಯಾಕೇಜ್
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜನವರಿ 6 ರೊಳಗೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್/ HR RITES Ltd. (ಶಿಖರ್)
ಪ್ಲಾಟ್ ನಂ.1
ಸೆಕ್ಟರ್-29
ಗುರ್ಗಾಂವ್-122001
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 06/01/2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ