• ಹೋಂ
  • »
  • ನ್ಯೂಸ್
  • »
  • Jobs
  • »
  • Railway Jobs: ಎಂಜಿನಿಯರಿಂಗ್ ಆಗಿದ್ರೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗ- ಈಗಲೇ Apply ಮಾಡಿ

Railway Jobs: ಎಂಜಿನಿಯರಿಂಗ್ ಆಗಿದ್ರೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗ- ಈಗಲೇ Apply ಮಾಡಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಅರ್ಜಿ ಹಾಕಲು ಇದೇ ಫೆಬ್ರವರಿ 21, 2023 ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಪ್ಲಿಕೇಶನ್ ಹಾಕಬಹುದು.

  • Share this:

RITES Recruitment 2023: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು(Rail India Technical and Economic Services) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಕನ್ಸಲ್ಟೆಂಟ್ (Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ರೈಲ್ವೆ ಇಲಾಖೆಯ ಕೆಲಸ(Job) ಪಡೆಯಬೇಕು ಎಂದು ಹಂಬಲಿಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಜಿ ಹಾಕಲು ಇದೇ ಫೆಬ್ರವರಿ 21, 2023 ಕೊನೆಯ ದಿನವಾಗಿದೆ (Last Date). ಆಸಕ್ತರು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಎಂಜಿನಿಯರಿಂಗ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಪ್ಲಿಕೇಶನ್ (Application) ಹಾಕಬಹುದು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು
ಹುದ್ದೆಕನ್ಸಲ್ಟೆಂಟ್
ಒಟ್ಟು ಹುದ್ದೆ19
ವಿದ್ಯಾರ್ಹತೆಬಿಇ/ಬಿ.ಟೆಕ್
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳಹರಿಯಾಣ
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 21, 2023

ವಿದ್ಯಾರ್ಹತೆ:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: University Jobs: ಬೆಳಗಾವಿಯ ರಾಣಿ ಚೆನ್ನಮ್ಮ ಯೂನಿವರ್ಸಿಟಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ


ವಯೋಮಿತಿ:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2023ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು.


ಉದ್ಯೋಗದ ಸ್ಥಳ:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹರಿಯಾಣದ ಗುರುಗ್ರಾಮದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ವೇತನ:
ನಿಗದಿಪಡಿಸಿಲ್ಲ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 21, 2023


ಇದನ್ನೂ ಓದಿ: Railway Jobs: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಾಳೆಯೊಳಗೆ ಅರ್ಜಿ ಹಾಕಿ


ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕಕ ಸಂದರ್ಶನ



ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.


ದೇಶ್ ರಾಜ್ ಅಸಿಸ್ಟೆಂಟ್ ಮ್ಯಾನೇಜರ್/ಎಚ್‌ಆರ್ ರೈಟ್ಸ್ ಲಿಮಿಟೆಡ್.(ಶಿಖರ್)
ಪ್ಲಾಟ್ ನಂ.1
ಸೆಕ್ಟರ್ -29
ಗುರ್‌ಗಾಂವ್ - 122001

Published by:Latha CG
First published: