RRB Recruitment 2023: ರೈಲ್ವೆ ನೇಮಕಾತಿ ಮಂಡಳಿ(Railway Recruitment Board) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರೈಲ್ವೆ ಇಲಾಖೆಯಲ್ಲಿ(Railway Department) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಂದ ಇದೊಂದು ಒಳ್ಳೆಯ ಅವಕಾಶವಾಗಿದೆ. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ರೈಲ್ವೆ ನೇಮಕಾತಿ ಮಂಡಳಿಯು ಒಟ್ಟು 7784 ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್(Travelling Ticket Examiner) ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸುತ್ತಿದೆ. ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಮಾರ್ಚ್ 10, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ರೈಲ್ವೆ ನೇಮಕಾತಿ ಮಂಡಳಿ |
ಹುದ್ದೆ | ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ |
ಒಟ್ಟು ಹುದ್ದೆ | 7784 |
ವಿದ್ಯಾರ್ಹತೆ | ಪಿಯುಸಿ, ಪದವಿ |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮಾರ್ಚ್ 10, 2023 |
ಇದನ್ನೂ ಓದಿ: Railway Jobs: ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ IRCTC- ತಿಂಗಳಿಗೆ 1.80 ಲಕ್ಷ ಸಂಬಳ
ವಯೋಮಿತಿ:
ರೈಲ್ವೆ ನೇಮಕಾತಿ ಮಂಡಳಿಯು ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 10, 2023
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಶುಲ್ಕ ಎಷ್ಟು?
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: Bengaluru: ರೈಲ್ ವ್ಹೀಲ್ ಫ್ಯಾಕ್ಟರಿಯಲ್ಲಿ 10th ಪಾಸಾದವರಿಗೆ ಉದ್ಯೋಗ- ಈಗಲೇ ಅಪ್ಲೈ ಮಾಡಿ
ವೇತನ:
ಅಭ್ಯರ್ಥಿಗಳಿಗೆ ವೇತನವನ್ನು ನಿಯಮಾನುಸಾರ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ