South Eastern Railway Recruitment 2023: ಆಗ್ನೇಯ ರೈಲ್ವೆಯು (South Eastern Railway ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 548 ಟ್ರೇಡ್ ಅಪ್ರೆಂಟಿಸ್ (Trade Apprentice) ಹುದ್ದೆಗಳ ಭರ್ತಿಗೆ ಸಂಬಂಧಿಸಿದ ಅಧಿಸೂಚನೆ ಹೊರಡಿಸಲಾಗಿದೆ. ರೈಲ್ವೆ ಇಲಾಖೆಯು ಐಟಿಐ, 10ನೇ ತರಗತಿ, 12ನೇ ತರಗತಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್(Online) ಅರ್ಜಿಯನ್ನು ಆಹ್ವಾನಿಸಿದೆ. ಈ 548 ಟ್ರೇಡ್ ಅಪ್ರೆಂಟಿಸ್ ಪೋಸ್ಟ್ಗಳು ಆಗ್ನೇಯ ರೈಲ್ವೆ, ಕೋಲ್ಕತ್ತಾ, ಪಶ್ಚಿಮ ಬಂಗಾಳದಲ್ಲಿವೆ.
ಆಗ್ನೇಯ ರೈಲ್ವೆ ನೇಮಕಾತಿ 2023: ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಜೂನ್ 3, 2023ರೊಳಗೆ ಸ್ವೀಕರಿಸಲಾಗುತ್ತದೆ.
ಇದನ್ನೂ ಓದಿ: SBI Recruitment 2023: ಲಕ್ಷಗಟ್ಟಲೇ ಸಂಬಳದ ಉದ್ಯೋಗ ಬೇಕಾ? ಇಲ್ಲಿ ಅಪ್ಲೈ ಮಾಡಿ, ಯಾವುದೇ ಎಕ್ಸಾಂ ಇಲ್ಲ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮೇ 6, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜೂನ್ 3, 2023
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು- 100 ರೂ.
SC/ST/ ಮಾಜಿ ಸೈನಿಕ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಶುಲ್ಕವನ್ನು ಡೆಬಿಡ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬೇಕು.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು- 15ರಿಂದ 24 ವರ್ಷ
ಇದನ್ನೂ ಓದಿ: Banking Jobs: ಸಿಟಿ ಯೂನಿಯನ್ ಬ್ಯಾಂಕ್ ನೇಮಕಾತಿ- ಮ್ಯಾನೇಜರ್ ಹುದ್ದೆಗಳಿಗೆ ಇವತ್ತೇ ಅರ್ಜಿ ಹಾಕಿ
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ
ಉದ್ಯೋಗದ ಸ್ಥಳ:
ಆಗ್ನೇಯ ರೈಲ್ವೆಯ ಮುಖ್ಯ ಸಿಬ್ಬಂದಿ ಅಧಿಕಾರಿಯ ಕಛೇರಿ
ಗಾರ್ಡನ್ ರೀಚ್
ಕೋಲ್ಕತ್ತಾ-700043
ಸಂಸ್ಥೆ | ಆಗ್ನೇಯ ರೈಲ್ವೆ |
ಹುದ್ದೆ | ಟ್ರೇಡ್ ಅಪ್ರೆಂಟಿಸ್ |
ವಿದ್ಯಾರ್ಹತೆ | 10th, ಪಿಯುಸಿ, ಐಟಿಐ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಭಾರತ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಜೂನ್ 3, 2023 |
ವಿದ್ಯಾರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಕಡ್ಡಾಯವಾಗಿ ಶೇ.50ರಷ್ಟು ಅಂಕಗಳೊಂದಿಗೆ 10ನೇ ತರಗತಿ, 12ನೇ ತರಗತಿ & ಐಟಿಐ ಪಾಸಾಗಿರಬೇಕು.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ನೀವು ಮೇ 6, 2023 ರಿಂದ ಜೂನ್ 3, 2023 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ