South Eastern Railway Recruitment 2023: ಭಾರತೀಯ ರೈಲ್ವೆಯು ಆಗಾಗ್ಗೆ ಹೊಸ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸುತ್ತದೆ. ಇದೀಗ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸಲು ಆಗ್ನೇಯ ರೈಲ್ವೆಯು(South Eastern Railway ) ಅರ್ಜಿ ಆಹ್ವಾನಿಸಿದೆ. ಅನೇಕ ರೈಲ್ವೆ ಅಡ್ವೋಕೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೇ ಫೆಬ್ರವರಿ 10, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ತಡಮಾಡದೇ ಈಗಲೇ ಅರ್ಜಿ ಹಾಕಿ. ಅಭ್ಯರ್ಥಿಗಳು ತಮ್ಮ ರೆಸ್ಯೂಮ್ನ್ನು ಇ-ಮೇಲ್ ಮಾಡುವ ಮೂಲಕ ಆನ್ಲೈನ್ನಲ್ಲಿ(Online) ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಆಗ್ನೇಯ ರೈಲ್ವೆ |
ಹುದ್ದೆ | ರೈಲ್ವೆ ಅಡ್ವೋಕೇಟ್ |
ವಿದ್ಯಾರ್ಹತೆ | ಪದವಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ಕೊಲ್ಕತ್ತಾ |
ಅರ್ಜಿ ಸಲ್ಲಿಸಲು ಕೊನೆಯ ದಿನ | ಫೆಬ್ರವರಿ 10, 2023 |
ಆಯ್ಕೆ ಪ್ರಕ್ರಿಯೆ | ಸಂದರ್ಶನ |
ಇದನ್ನೂ ಓದಿ: Karnataka Jobs: ರಾಜ್ಯ ಕಂದಾಯ ಇಲಾಖೆಯಲ್ಲಿ 2000 ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ lawofficerssergrc40@gmail.com ಗೆ ನಾಳೆಯೊಳಗೆ ಕಳುಹಿಸಬೇಕು.
ವಿದ್ಯಾರ್ಹತೆ ಏನಿರಬೇಕು?
ಆಗ್ನೇಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ರೈಲ್ವೆ ಅಡ್ವೋಕೇಟ್ ಪೂರ್ಣಗೊಳಿಸಿರಬೇಕು.
ಉದ್ಯೋಗದ ಸ್ಥಳ:
ಆಗ್ನೇಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ:
ಆಗ್ನೇಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಇದನ್ನೂ ಓದಿ: Teaching Jobs: ಕೇಂದ್ರೀಯ ವಿದ್ಯಾಲಯ ಜಾಲಹಳ್ಳಿಯಲ್ಲಿ ಟೀಚರ್ ಹುದ್ದೆಗಳಿಗೆ ಅರ್ಜಿ ಹಾಕಿ
ಅಭ್ಯರ್ಥಿಗಳು ಅರ್ಜಿಯ ಹಾರ್ಡ್ ಪ್ರತಿಯನ್ನು ಈ ಕೆಳಕಂಡ ವಿಳಾಸಕ್ಕೂ ಕಳುಹಿಸಬಹುದು.
ಡೆಪ್ಯುಟಿ ಜನರಲ್ ಮ್ಯಾನೇಜರ್ (ಕಾನೂನು)
ಆಗ್ನೇಯ ರೈಲ್ವೆ
NAB ಗ್ರೌಂಡ್ ಫ್ಲೋರ್
ಗಾರ್ಡನ್ ರೀಚ್
ಕೊಲ್ಕತ್ತಾ- 700043
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ