ನೈಋತ್ಯ ರೈಲ್ವೆಯು(South Western Railway) ಹುಬ್ಬಳ್ಳಿ ವಿಭಾಗದಲ್ಲಿ(Hubli Branch) ಖಾಲಿ ಇರುವ 2 ಜೂನಿಯರ್ ಎಂಜಿನಿಯರ್(Junior Engineer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಕರ್ನಾಟಕ(Karnataka) ದಲ್ಲಿಯೇ ಕೇಂದ್ರ ಸರ್ಕಾರದ ಉದ್ಯೋಗ(Central Government Jobs) ಪಡೆಯಬೇಕೆಂದು ಹಂಬಲಿಸುತ್ತಿದ್ದವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಡಿಸೆಂಬರ್ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ನೈರುತ್ಯ ರೈಲ್ವೆ |
ಹುದ್ದೆ | ಜೂನಿಯರ್ ಎಂಜಿನಿಯರ್ |
ಒಟ್ಟು ಹುದ್ದೆ | 2 |
ವೇತನ | ನಿಯಮಾನುಸಾರ |
ಉದ್ಯೋಗದ ಸ್ಥಳ | ಹುಬ್ಬಳ್ಳಿ |
ವಯೋಮಿತಿ:
ನೈರುತ್ಯ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜುಲೈ 1, 2022ಕ್ಕೆ ಗರಿಷ್ಠ 42 ವರ್ಷ ಮೀರಿರಬಾರದು.
ಇದನ್ನೂ ಓದಿ: Job Alert: ಬೆಂಗಳೂರಿನಲ್ಲಿ 54,000 ಸಂಬಳದ ಕೆಲಸ ಖಾಲಿ ಇದೆ- ಈಗಲೇ ರೆಸ್ಯೂಮ್ ಕಳುಹಿಸಿ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
ಅರ್ಜಿ ಶುಲ್ಕ:
ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಟೆಸ್ಟ್
ದಾಖಲಾತಿ ಪರಿಶೀಲನೆ
ಮೆಡಿಕಲ್ ಎಕ್ಸಾಂ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/11/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 24/12/2022
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಯಾವುದೇ ಸಮಸ್ಯೆ ಎದುರಾದರೆ,ಇ-ಮೇಲ್ ಐಡಿ gdcerrcswr2022@gmail.com ಗೆ ಮೇಲ್ ಕಳುಹಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ