• ಹೋಂ
  • »
  • ನ್ಯೂಸ್
  • »
  • Jobs
  • »
  • Southern Railway Recruitment 2023: PUC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಕೆಲಸ- ಉತ್ತಮ ಸಂಬಳ

Southern Railway Recruitment 2023: PUC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿದೆ ಕೆಲಸ- ಉತ್ತಮ ಸಂಬಳ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಮೇ 8, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

  • News18 Kannada
  • 3-MIN READ
  • Last Updated :
  • Tamil Nadu, India
  • Share this:

Southern Railway Recruitment 2023: ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲೊಂದು ಬೊಂಬಾಟ್ ಸುದ್ದಿ ಇದೆ. ನಿರುದ್ಯೋಗಿಗಳಿಗೆ ಇದು ಖುಷಿ ವಿಷಯವೂ ಹೌದು. ದಕ್ಷಿಣ ರೈಲ್ವೆಯು (Southern Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಸ್ಟೆನೋಗ್ರಾಫರ್ ಗ್ರೇಡ್ III (Stenographer Grade-3) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಹಾಕಬೇಕು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಮೇ 8, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆದಕ್ಷಿಣ ರೈಲ್ವೆ
ಹುದ್ದೆಸ್ಟೆನೋಗ್ರಾಫರ್ ಗ್ರೇಡ್ III
ಒಟ್ಟು ಹುದ್ದೆ24
ವಿದ್ಯಾರ್ಹತೆಪಿಯುಸಿ
ವೇತನನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳತಮಿಳುನಾಡು
ಅರ್ಜಿ ಸಲ್ಲಿಸಲು ಕೊನೆಯ ದಿನಮೇ 8, 2023

ವಿದ್ಯಾರ್ಹತೆ:
ದಕ್ಷಿಣ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ/ ಪಿಯುಸಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: Federal Bank Recruitment 2023: ಫೆಡರಲ್ ಬ್ಯಾಂಕ್​​ನಲ್ಲಿ ಬಂಪರ್ ಉದ್ಯೋಗಾವಕಾಶ- ಡಿಗ್ರಿ ಆಗಿದ್ರೆ ಅರ್ಜಿ ಹಾಕಿ


ವಯೋಮಿತಿ:
ದಕ್ಷಿಣ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 42 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ನಿಗದಿಪಡಿಸಿಲ್ಲ.


ಇದನ್ನೂ ಓದಿ: DOPT Recruitment 2023: ತಿಂಗಳಿಗೆ ಲಕ್ಷಗಟ್ಟಲೇ ಸಂಬಳ- ಸರ್ಕಾರಿ ನೌಕರಿಗೆ ನಾಳೆಯೊಳಗೆ ಅರ್ಜಿ ಹಾಕಿ


ಉದ್ಯೋಗದ ಸ್ಥಳ:
ತಮಿಳುನಾಡಿನ ಚೆನ್ನೈ, ಮಧುರೈ, ತಿರುಚಿನಾಪಳ್ಳಿ




ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 8, 2023

top videos
    First published: