Southern Railway Recruitment 2023: ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲೊಂದು ಬೊಂಬಾಟ್ ಸುದ್ದಿ ಇದೆ. ನಿರುದ್ಯೋಗಿಗಳಿಗೆ ಇದು ಖುಷಿ ವಿಷಯವೂ ಹೌದು. ದಕ್ಷಿಣ ರೈಲ್ವೆಯು (Southern Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 24 ಸ್ಟೆನೋಗ್ರಾಫರ್ ಗ್ರೇಡ್ III (Stenographer Grade-3) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಹಾಕಬೇಕು. ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಮೇ 8, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ದಕ್ಷಿಣ ರೈಲ್ವೆ |
ಹುದ್ದೆ | ಸ್ಟೆನೋಗ್ರಾಫರ್ ಗ್ರೇಡ್ III |
ಒಟ್ಟು ಹುದ್ದೆ | 24 |
ವಿದ್ಯಾರ್ಹತೆ | ಪಿಯುಸಿ |
ವೇತನ | ನಿಗದಿಪಡಿಸಿಲ್ಲ |
ಉದ್ಯೋಗದ ಸ್ಥಳ | ತಮಿಳುನಾಡು |
ಅರ್ಜಿ ಸಲ್ಲಿಸಲು ಕೊನೆಯ ದಿನ | ಮೇ 8, 2023 |
ದಕ್ಷಿಣ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 42 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: Assistant Professor ಹುದ್ದೆ ಖಾಲಿ ಇದೆ; ಬೆಂಗಳೂರಿನ ಸಿಂಧಿ ಕಾಲೇಜ್ನಲ್ಲಿ ಕೆಲಸ
ವೇತನ:
ನಿಗದಿಪಡಿಸಿಲ್ಲ.
ಉದ್ಯೋಗದ ಸ್ಥಳ:
ತಮಿಳುನಾಡಿನ ಚೆನ್ನೈ, ಮಧುರೈ, ತಿರುಚಿನಾಪಳ್ಳಿ
ಇದನ್ನೂ ಓದಿ: Indian Railway Recruitment 2023: 10ನೇ ಕ್ಲಾಸ್, ಪಿಯುಸಿ ಓದಿದವರಿಗೆ ರೈಲ್ವೆ ಇಲಾಖೆಯಲ್ಲಿದೆ ಬಂಪರ್ ಉದ್ಯೋಗ
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 8, 2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ