Jobs in Bangalore: ರಾಜೀವ್​ ಗಾಂಧಿ ಆರೋಗ್ಯ ವಿವಿಯಲ್ಲಿದೆ ಎಂಸಿಎ ಆದವರಿಗೆ ಉದ್ಯೋಗಾವಕಾಶ

ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ನಡೆಸಲಾಗುತ್ತಿದೆ. 

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ರಾಜೀವ್​ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ (Rajiv Gandhi University of Health Sciences)  ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರೋಗ್ರಾಮರ್​, ಜೂನಿಯರ್​ ಪ್ರೋಗ್ರಾಮರ್ (Programmer, Junior Programmer)​ ಸೇರಿದಂತೆ ಒಟ್ಟು 9 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಂಸಿಎ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇಮೇಲ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 25 ಆಗಿದೆ.

    ಈ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ವಿಶ್ವವಿದ್ಯಾಲಯದ ಹೆಸರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS)
    ಹುದ್ದೆಯ ಹೆಸರು: ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್
    ಹುದ್ದೆಗಳ ಸಂಖ್ಯೆ: 9
    ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
    ವೇತನ: 43100-97100 ರೂ ಪ್ರತಿ ತಿಂಗಳು





















    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವೇತನ
    ಪ್ರೋಗ್ರಾಮರ್2ಕಂಪ್ಯೂಟರ್​ ಸೈನ್ಸ್​ನಲ್ಲಿ ಬಿಇ ಅಥವಾ ಎಂಸಿಎ ಪದವಿ52650-97100 ರೂ ಮಾಸಿಕ
    ಜೂನಿಯರ್ ಪ್ರೋಗ್ರಾಮರ್7ಕಂಪ್ಯೂಟರ್​ ಸೈನ್ಸ್​ನಲ್ಲಿ ಬಿಇ ಅಥವಾ ಎಂಸಿಎ ಪದವಿ43100-83900 ರೂ ಮಾಸಿಕ

    ವಯೋಮಿತಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ಇದನ್ನು ಓದಿ: ಬೆಂಗಳೂರು ಐಐಎಸ್ಸಿಯಲ್ಲಿ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ; ಯಾವುದೇ ಡಿಗ್ರಿ ಆಗಿದ್ರೂ ಅರ್ಜಿ ಸಲ್ಲಿಸಿ

    ವಯೋಮಿತಿ ಸಡಿಲಿಕೆ:
    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ

    ಅರ್ಜಿ ಸಲ್ಲಿಕೆ: ಇ ಮೇಲ್​ ಮೂಲಕ

    ಇಮೇಲ್​ ವಿಳಾಸ: registrar@rguhs.ac.in

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 08 ಆಗಸ್ಟ್​​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 25 ಆಗಸ್ಟ್ 2022

    ಇದನ್ನು ಓದಿ: ಎಸ್​ಎಸ್​ಎಲ್​ಸಿ ಪಾಸ್​ ಆಗಿದ್ರೆ ಹೈಕೋರ್ಟ್​ನಲ್ಲಿದೆ ಉದ್ಯೋಗಾವಕಾಶ; 150 ಹುದ್ದೆಗೆ ಅರ್ಜಿ ಆಹ್ವಾನ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: rguhs.ac.in

    ಅರ್ಜಿ ಸಲ್ಲಿಕೆ ವಿಧಾನ
    - ನಿಗದಿತ ಅರ್ಜಿಯನ್ನು ಡೌನ್​ ಲೋಡ್​ ಮಾಡಿ. ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ. ಜೊತೆಗೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಅವುಗಳನ್ನು ಲಗತ್ತಿಸಿ ಮೇಲಿನ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕಕ್ಕೆ ಮುನ್ನ ಕಳುಹಿಸಿ.

    -ಅರ್ಜಿ ಸಲ್ಲಿಸುವ ವೇಳೆ ಇಬ್ಬರು ವ್ಯಕ್ತಿಗಳ ರೆಫರೆನ್ಸ್​​ ಕಂಟಾಕ್ಟ್​ ಡಿಟೈಲ್ಸ್​ ಅನ್ನು ನೀಡಬೇಕು

    -ನಿಗದಿತ ವಿದ್ಯಾರ್ಹತೆಯನ್ನು ಹೊಂದಿರುವುದು ಅಭ್ಯರ್ಥಿಯನ್ನು ಸಂದರ್ಶನಕ್ಕೆ ಕರೆಯಲಾಗುವುದು ಎಂದು ಖಚಿತಪಡಿಸುವುದಿಲ್ಲ. ಯೋಜನೆಯ ಅಗತ್ಯತೆ ಮತ್ತು ಅರ್ಜಿದಾರರ ಅರ್ಹತೆಯ ಆಧಾರದ ಮೇಲೆ ಶಾರ್ಟ್‌ಲಿಸ್ಟಿಂಗ್ ಮಾಡಲಾಗುತ್ತದೆ.

    -ಸಂದರ್ಶನದ ದಿನಾಂಕದ ಬಗ್ಗೆ ಇ-ಮೇಲ್ ಅಥವಾ ಫೋನ್ ಮೂಲಕ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ತಿಳಿಸಲಾಗುತ್ತದೆ. ಆದ್ದರಿಂದ, ಅಭ್ಯರ್ಥಿಯು ತಮ್ಮ ಅರ್ಜಿಗಳಲ್ಲಿ ಮಾನ್ಯವಾದ ಇ-ಮೇಲ್ ಐಡಿಗಳು ಮತ್ತು ಮೊಬೈಲ್ ಸಂಖ್ಯೆಯನ್ನು ಒದಗಿಸಬೇಕು.

    -ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನಕ್ಕಾಗಿ  ಕರೆಯಬಹುದು.
    Published by:Seema R
    First published: