Library Trainee Jobs: ಲೈಬ್ರರಿ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲಿದೆ ಅವಕಾಶ

ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್​ನಲ್ಲಿ (Raman Research Institute) ಲೈಬ್ರಿ ಟ್ರೈನಿ (Library Trainee) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎರಡು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಯಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 23 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಯ ಹೆಸರುರಾಮನ್ ಸಂಶೋಧನಾ ಸಂಸ್ಥೆ (RRI)
    ಹುದ್ದೆಯ ಹೆಸರುಲೈಬ್ರರಿ ಟ್ರೈನಿ
    ಹುದ್ದೆಗಳ ಸಂಖ್ಯೆ2
    ಉದ್ಯೋಗ ಸ್ಥಳಬೆಂಗಳೂರು
    ಸ್ಟೈಪೆಂಡ್20000-21000 ರೂ ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ  ಗ್ರಂಥಾಲಯ ವಿಜ್ಞಾನದಲ್ಲಿ ಪದವಿ ಅನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ:  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  30 ವರ್ಷಗಳು ಮೀರಿರಬಾರದು.

    ಇದನ್ನು ಓದಿ: ಬಿಬಿಎಂಪಿಯಲ್ಲಿ ನೇಮಕಾತಿ; ಗ್ರೂಪ್​ ಎ ಮತ್ತು ಬಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

    ವಯೋಮಿತಿ ಸಡಿಲಿಕೆ:
    ರಾಮನ್ ಸಂಶೋಧನಾ ಸಂಸ್ಥೆಯ ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ:
    ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಸೆಪ್ಟೆಂಬರ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಸೆಪ್ಟೆಂಬರ್​​ 2022

    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: rri.res.in

    ಇದನ್ನು ಓದಿ: ಬಿಎಚ್​ಇಎಲ್​ನಲ್ಲಿ 150 ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ

    - ಅರ್ಜಿಯಲ್ಲಿ ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಸೇರಿದಂತೆ ಇನ್ನಿತರ ಅಗತ್ಯ ದಾಖಲೆಗಳ ಮಾಹಿತಿ ಭರ್ತಿ ಮಾಡಿ.

    -ನಿಮ್ಮ ವರ್ಗಕ್ಕೆ ಅನುಸಾರವಾಗಿ ಅರ್ಜಿ ಶುಲ್ಕ ಪಾವತಿಸಿ, ಅದರ ಮಾಹಿತಿ ಅಪ್​ಡೇಟ್​ ಮಾಡಿ

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: