District Court Jobs: ರಾಮನಗರ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನ

ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ರಾಮನಗರ ಜಿಲ್ಲಾ ನ್ಯಾಯಾಲಯ (Ramanagara District Court) ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನರ (Peon) ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್​ಎಸ್​ಎಲ್​ಸಿ ಪಾಸ್​ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 20 ಆಗಿದೆ.

    ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆರಾಮನಗರ ಇಕೋರ್ಟ್
    ಹುದ್ದೆಜವಾನ
    ಹುದ್ದೆಗಳ ಸಂಖ್ಯೆ21
    ಉದ್ಯೋಗ ಸ್ಥಳರಾಮನಗರ
    ವೇತನ17000-28950ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ ಅಥವಾ ಅದಕ್ಕೆ ತತ್ಸಮಾನದ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು.
    ಅಭ್ಯರ್ಥಿಗೆ ಕನ್ನಡ ಓದಲು ಮತ್ತು ಬರೆಯಲು ಬರಬೇಕು.

    ಇದನ್ನು ಓದಿ: ಹುಬ್ಬಳ್ಳಿ ಇನ್ಫೋಸಿಸ್​ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ; ಉತ್ತರ ಕರ್ನಾಟಕ ಅಭ್ಯರ್ಥಿಗಳಿಗೆ ಬಂಪರ್​ ಚಾನ್ಸ್​

    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ, ಪ್ರವರ್ಗ 1  ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 100 ರೂ
    ಸಾಮಾನ್ಯ ವರ್ಗದ ಅಭ್ಯರ್ಥಿಗಳು: 200 ರೂ

    ಆಯ್ಕೆ ಪ್ರಕ್ರಿಯೆ
    ಮೆರಿಟ್​ ಪಟ್ಟಿ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಸೆಪ್ಟೆಂಬರ್​ 2022
    ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20 ಸೆಪ್ಟೆಂಬರ್​ 2022

    ಇದನ್ನು ಓದಿ: ಶಿರಸಿಯ ಕೆಡಿಸಿಸಿ ಬ್ಯಾಂಕ್​ನಲ್ಲಿ ನೇಮಕಾತಿ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: districts.ecourts.gov.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: