RCF Recruitment 2022: SSLC, ITI ಪಾಸಾದವರಿಗೆ ರೈಲ್​ ಕೋಚ್​ ಫ್ಯಾಕ್ಟರಿಯಲ್ಲಿ ಉದ್ಯೋಗ

ಜನವರಿ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
RCF Recruitment 2022:  ರೈಲ್​ ಕೋಚ್​ ಫ್ಯಾಕ್ಟರಿ(Rain Coach Factory) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 56 ಅಪ್ರೆಂಟಿಸ್(Apprentice) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಜನವರಿ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ rcf.indianrailways.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.ಸಂಸ್ಥೆರೈಲ್​ ಕೋಚ್​ ಫ್ಯಾಕ್ಟರಿ
ಹುದ್ದೆಯ ಹೆಸರುಅಪ್ರೆಂಟಿಸ್
ಒಟ್ಟು ಹುದ್ದೆಗಳು56
ವಿದ್ಯಾರ್ಹತೆ10ನೇ ತರಗತಿ, ಐಟಿಐ
ಉದ್ಯೋಗದ ಸ್ಥಳಕಪುರ್ತಲಾ
ವೇತನನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ11/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ31/01/2022ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/01/2022

ಇದನ್ನೂ ಓದಿ:Railway Jobs: ರೈಲ್ವೆ ಇಲಾಖೆಯಲ್ಲಿ 75 ಹುದ್ದೆಗಳು ಖಾಲಿ, ತಿಂಗಳಿಗೆ ₹ 45,000 ಸಂಬಳ, ಈಗಲೇ Apply ಮಾಡಿ

ಅರ್ಜಿ ಶುಲ್ಕ:
ರೈಲ್​ ಕೋಚ್​ ಫ್ಯಾಕ್ಟರಿ ನೇಮಕಾತಿ ಅಧಿಸೂಚನೆ ಪ್ರಕಾರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
SC/ST/PwD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.

ವಯೋಮಿತಿ:
ರೈಲ್​ ಕೋಚ್​ ಫ್ಯಾಕ್ಟರಿ ನೇಮಕಾತಿ ಅಧಿಸೂಚನೆ ಪ್ರಕಾರ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 15-24 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:
ರೈಲ್​ ಕೋಚ್​ ಫ್ಯಾಕ್ಟರಿ ನೇಮಕಾತಿ ಅಧಿಸೂಚನೆ ಪ್ರಕಾರ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪಂಜಾಬ್​ನ ಕಪುರ್ತಲಾದಲ್ಲಿ ಉದ್ಯೋಗ ನೀಡಲಾಗುತ್ತದೆ.

ಇದನ್ನೂ ಓದಿ: NIMHANS Recruitment 2022: ತಿಂಗಳಿಗೆ ₹ 67,700 ಸಂಬಳ, ನಿಮ್ಹಾನ್ಸ್​​ನಲ್ಲಿ ಸೀನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ

ವೇತನ:
ರೈಲ್​ ಕೋಚ್​ ಫ್ಯಾಕ್ಟರಿ ನೇಮಕಾತಿ ಅಧಿಸೂಚನೆ ಪ್ರಕಾರ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: