RDPR Karnataka Jobs: ತಿಂಗಳಿಗೆ ₹ 35,000 ಸಂಬಳ, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗ

ನವೆಂಬರ್ 26 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಪೋಸ್ಟಲ್​/ ಆಫ್​ಲೈನ್(Offline/Postal)​ ಮೂಲಕ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

RDPR

RDPR

  • Share this:
RDPR Karnataka Recruitment 2021: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ​ -ಕರ್ನಾಟಕ(Rural Development and Panchayat Raj Department-Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರ(Karnataka Government) ದ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಒಂದು ಡಾಟಾಬೇಸ್​ ಅಡ್ಮಿನಿಸ್ಟ್ರೇಟರ್(Database Administrator) ಹುದ್ದೆ ಖಾಲಿ ಇದ್ದು, ಬಿಇ, ಬಿ.ಟೆಕ್, ಎಂಸಿಎ ಹಾಗೂ ಎಂಸ್ಸಿ ಪೂರ್ಣಗೊಳಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 26 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಪೋಸ್ಟಲ್​/ ಆಫ್​ಲೈನ್(Offline/Postal)​ ಮೂಲಕ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ​ -ಕರ್ನಾಟಕ ಅಧಿಕೃತ ವೆಬ್​ಸೈಟ್​ rdpr.karnataka.gov.in ಗೆ ಭೇಟಿ ನೀಡಬಹುದು.

ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-ಕರ್ನಾಟಕ
ಹುದ್ದೆಯ ಹೆಸರುಡಾಟಾಬೇಸ್​ ಅಡ್ಮಿನಿಸ್ಟ್ರೇಟರ್
ಒಟ್ಟು ಹುದ್ದೆಗಳು01
ವಿದ್ಯಾರ್ಹತೆಬಿಇ, ಬಿ.ಟೆಕ್, ಎಂಸಿಎ ಹಾಗೂ ಎಂಸ್ಸಿ
ಉದ್ಯೋಗದ ಸ್ಥಳಬೆಂಗಳೂರು
ವೇತನಮಾಸಿಕ ₹ 35,000
ಅರ್ಜಿ ಸಲ್ಲಿಕೆ ವಿಧಾನಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ06/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ26/11/2021ವಿದ್ಯಾರ್ಹತೆ:

ಡಾಟಾಬೇಸ್​ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಎಂಸಿಎ ಹಾಗೂ ಎಂಸ್ಸಿ ಪೂರ್ಣಗೊಳಿಸರಬೇಕು.

ಇದನ್ನೂ ಓದಿ: BMTC Recruitment 2021: SSLC ಪಾಸಾದವರಿಗೆ BMTCಯಲ್ಲಿ ಬಂಪರ್ ಉದ್ಯೋಗ; ಈಗಲೇ ಅರ್ಜಿ ಸಲ್ಲಿಸಿ

ವೇತನ:

ಡಾಟಾಬೇಸ್​ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 35,000 ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26/11/2021

ಉದ್ಯೋಗದ ಸ್ಥಳ

ಡಾಟಾಬೇಸ್​ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ಕೊಡಲಾಗುತ್ತದೆ.

ಕಾರ್ಯಾನುಭವ:

ಡಾಟಾಬೇಸ್​ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಸಂಬಂಧಿತ ಕಾರ್ಯಕ್ಷೇತ್ರದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವಯೋಮಿತಿ:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಯಮಾನುಸಾರ ಡಾಟಾಬೇಸ್​ ಅಡ್ಮಿನಿಸ್ಟ್ರೇಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 45 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಶಾರ್ಟ್​ಲಿಸ್ಟ್​ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನ ಅಥವಾ ಲಿಖಿತ ಪರೀಕ್ಷೆಗೆ ಕರೆಯಲಾಗುತ್ತದೆ.

ಇದನ್ನೂ ಓದಿ: Central Railway Recruitment 2021: ಸೆಂಟ್ರಲ್ ರೈಲ್ವೆಯಲ್ಲಿ ಶಿಕ್ಷಕ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 27,500

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ನಿರ್ದೇಶಕರು, ಇ-ಗವರ್ನೆನ್ಸ್​
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,
3ನೇ ಮಹಡಿ, 3ನೇ ಗೇಟ್, M.S. ಬಿಲ್ಡಿಂಗ್
ಬೆಂಗಳೂರು- 560001ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
Published by:Latha CG
First published: