RDWSD Recruitment: ಧಾರವಾಡದಲ್ಲಿ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ಹುದ್ದೆ ವಿವರ

ಈ ಹುದ್ದೆಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಮುಂದುವರೆಸಲಾಗುವುದು.

ಧಾರವಾಡ ಜಿಲ್ಲಾ ಪಂಚಾಯತ್

ಧಾರವಾಡ ಜಿಲ್ಲಾ ಪಂಚಾಯತ್

 • Share this:
  ಧಾರವಾಡ ಜಿಲ್ಲಾ ಪಂಚಾಯತ್ (Dharwad Zilla Panchayat)​ ವಿಭಾಗದ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ (Rural Drinking Water and Sanitation Department) ವಿಭಾಗದಿಂದ ಸಮಾಲೋಚಕರ (MIS Consultant)  ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಈ ಹುದ್ದೆ ನೇಮಕಾತಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ. ಎಂಸಿಎ ಅಥವಾ ಎಂಎಸ್ಸಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​​ 2 ಆಗಿದೆ.

  ಈ ಹುದ್ದೆಯು ಸಂಪೂರ್ಣವಾಗಿ ತಾತ್ಕಾಲಿಕವಾಗಿದ್ದು, ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಅಭ್ಯರ್ಥಿಯ ಕಾರ್ಯಕ್ಷಮತೆ ಆಧಾರದ ಮೇಲೆ ಮುಂದುವರೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.  ಹುದ್ದೆ ಮಾಹಿತಿಹುದ್ದೆ ವಿವರ
  ಸಂಸ್ಥೆಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಧಾರವಾಡ
  ಹುದ್ದೆMIS ಸಲಹೆಗಾರ
  ಒಟ್ಟು ಹುದ್ದೆ1
  ಕಾರ್ಯ ನಿರ್ವಹಣೆ ಸ್ಥಳಧಾರವಾಡ
  ವೇತನ25000 ರೂ. ಪ್ರತಿ ತಿಂಗಳು

  ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಅಂಕಿಅಂಶಗಳಲ್ಲಿ ಸ್ನಾತಕೋತ್ತರ ಪದವಿ, ಎಂಸಿಎ, ಎಂಎಸ್ಸಿ, ಬಿಇ ಕಂಪ್ಯೂಟರ್ ಸೈನ್ಸ್‌ನಲ್ಲಿ ಪೂರ್ಣಗೊಳಿಸಿರಬೇಕು.

  ವಯೋಮಿತಿ: ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷಗಳು ಮೀರಿರಬಾರದು.

  ಇದನ್ನು ಓದಿ: ದಾವಣೆಗೆರೆಯಲ್ಲಿ 82 ಅಂಗನವಾಡಿ ಕಾರ್ಯಕರ್ತರ ಹುದ್ದೆ; ಜು. 29 ಅರ್ಜಿ ಸಲ್ಲಿಕೆಗೆ ಕಡೆಯ ದಿನ

  ವಯೋಮಿತಿ ಸಡಿಲಿಕೆ:
  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಧಾರವಾಡ ನಿಯಮಾವಳಿಯಂತೆ

  ಆಯ್ಕೆ ಪ್ರಕ್ರಿಯೆ
  ಸಂದರ್ಶನ

  ಅರ್ಜಿ ಸಲ್ಲಿಕೆ: ಆಫ್​​ಲೈನ್​

  ಪ್ರಮುಖ ದಿನಾಂಕಗಳು:
  ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26 ಜುಲೈ 2022
  ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02 ಆಗಸ್ಟ್ 2022

  ಅಧಿಸೂಚನೆ ಪ್ರಮುಖ ಲಿಂಕ್‌ಗಳು
  ಅಧಿಕೃತ ವೆಬ್‌ಸೈಟ್: dharwad.nic.in

  ಇದನ್ನು ಓದಿ: ತುಮಕೂರಿನ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯಲ್ಲಿದೆ ಉದ್ಯೋಗ; ತಿಂಗಳಿಗೆ 33,450 ರೂ ವೇತನ

  ಅರ್ಜಿ ಸಲ್ಲಿಕೆ ಪ್ರಕ್ರಿಯೆ

  ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

  -ಅಧಿಕೃತ ಅಧಿಸೂಚನೆಯಿಂದ- ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

  - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

  ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಈ ಕೆಳಗಿನ ವಿಳಾಶಕ್ಕೆ ಸಲ್ಲಿಸಿ.

  ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಲೋಕೂರ ಕಟ್ಟಡ, U.B ಹಿಲ್, ಧಾರವಾಡ – 580001
  Published by:Seema R
  First published: