ISEC Recruitment: ಅರ್ಥಶಾಸ್ತ್ರದಲ್ಲಿ ಎಂಎ ಆದವರಿಗೆ ಇದೆ ಉದ್ಯೋಗಾವಕಾಶ; ಮಾಸಿಕ 35,000 ರೂವರೆಗೆ ವೇತನ

ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ

  • Share this:
    ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಸಂಸ್ಥೆಯಲ್ಲಿ (Institute for Social and Economic Change) ವಿವಿಧ ಸಂಶೋಧನಾ ಸಹಾಯಕ ಹುದ್ದೆಗೆ (Research Assistant) ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಥಶಾಸ್ತ್ರದಲ್ಲಿ ಎಂಎ ಆದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಇ ಮೇಲ್​ ಮೂಲಕ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 17 ಆಗಿದೆ.

    ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಸಂಸ್ಥೆ
    ಹುದ್ದೆಯ ಹೆಸರುಸಂಶೋಧನಾ ಸಹಾಯಕರು
    ಹುದ್ದೆಗಳ ಸಂಖ್ಯೆ6
    ಉದ್ಯೋಗ ಸ್ಥಳಬೆಂಗಳೂರು
    ವೇತನ18000-35000 ರೂ. ಪ್ರತಿ ತಿಂಗಳು

    ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಅರ್ಥಶಾಸ್ತ್ರ ಅಥವಾ ಪರಿಸರ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಪಿಎಚ್​ಡಿ ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿದೆ ಯುವ ವೃತ್ತಿಪರ ಹುದ್ದೆ; ಬೇಗ ಅರ್ಜಿ ಸಲ್ಲಿಸಿ

    ವಯಸ್ಸಿನ ಮಿತಿ: ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ವಯಸ್ಸಿನ ಸಡಿಲಿಕೆ:
    ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ನೇಮಕಾತಿ ನಿಯಮದ ಅನುಸಾರ

    ಅರ್ಜಿ ಸಲ್ಲಿಕೆ: ಇಮೇಲ್​ ಮೂಲಕ

    ಇಮೇಲ್​ ವಿಳಾಸ: krcesp2022@isec.ac.in

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 12 ಆಗಸ್ಟ್​​ 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 17 ಆಗಸ್ಟ್ 2022
    ಆಯ್ಕೆಯಾದ ಅಭ್ಯರ್ಥಿಗಳಿಗೆ ಸೇರುವ ದಿನಾಂಕ: 23 ಆಗಸ್ಟ್ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: isec.ac.in

    ಇದನ್ನು ಓದಿ: ಕೋಲಾರ ಜಿಲ್ಲಾ ಪಂಚಾಯತ್​ನಲ್ಲಿದೆ 46 ಹುದ್ದೆ; ಲಿಖಿತ ಪರೀಕ್ಷೆ ಇಲ್ಲ, ನೇರ ನೇಮಕಾತಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: