RLDA Recruitment 2021: ತಿಂಗಳಿಗೆ ₹ 54,600 ಸಂಬಳ, ರೈಲ್ವೆ ಇಲಾಖೆಯಲ್ಲಿ BE, B Tech ಆದವರಿಗೆ ಉದ್ಯೋಗ

ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
RLDA Recruitment 2021: ರೈಲ್ ಲ್ಯಾಂಡ್​ ಡೆವಲಪ್​ಮೆಂಟ್ ಅಥಾರಿಟಿ- ರೈಲ್​ ಭೂಮಿ ವಿಕಾಸ ಪ್ರಾಧಿಕಾರ(Rail Land Development Authority) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 45 ಅಸಿಸ್ಟೆಂಟ್​ ಪ್ರಾಜೆಕ್ಟ್​ ಎಂಜಿನಿಯರ್(Assistant Project Engineer) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ.ಟೆಕ್(BE, B. Tech) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 23 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಆಸಕ್ತರು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ RLDAನ ಅಧಿಕೃತ ವೆಬ್​ಸೈಟ್​ www.rlda.indianrailways.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆ ರೈಲ್ ಲ್ಯಾಂಡ್​ ಡೆವಲಪ್​ಮೆಂಟ್ ಅಥಾರಿಟಿ
ಹುದ್ದೆಯ ಹೆಸರು ಅಸಿಸ್ಟೆಂಟ್​ ಪ್ರಾಜೆಕ್ಟ್​ ಎಂಜಿನಿಯರ್
ಒಟ್ಟು ಹುದ್ದೆಗಳು 45
ವಿದ್ಯಾರ್ಹತೆ ಬಿಇ, ಬಿ.ಟೆಕ್
ಉದ್ಯೋಗದ ಸ್ಥಳ ನವದೆಹಲಿ
ವೇತನ ಮಾಸಿಕ ₹ 54,600
ಅರ್ಜಿ ಸಲ್ಲಿಕೆ ವಿಧಾನ ಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 23/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23/12/2021



ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/12/2021

ಇದನ್ನೂ ಓದಿ: HPCL Recruitment 2021: ಗ್ರಾಜುಯೇಟ್​ ಅಪ್ರೆಂಟಿಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ₹ 25,000

ವಿದ್ಯಾರ್ಹತೆ:

ಅಸಿಸ್ಟೆಂಟ್​ ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​​ನಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್​ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಸಿಸ್ಟೆಂಟ್​ ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಗರಿಷ್ಠ 28 ವರ್ಷ ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:

ಅಸಿಸ್ಟೆಂಟ್​ ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನೂ ಓದಿ: Punjab & Sind Bank Recruitment 2021: ತಿಂಗಳಿಗೆ ₹ 84,000 ಸಂಬಳ; ಪಂಜಾಬ್ & ಸಿಂದ್ ಬ್ಯಾಂಕ್​ನಲ್ಲಿ ಉದ್ಯೋಗ

ವೇತನ:

ಅಸಿಸ್ಟೆಂಟ್​ ಪ್ರಾಜೆಕ್ಟ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 54,600 ವೇತನ ನೀಡಲಾಗುತ್ತದೆ.



ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:

ಸಿವಿಲ್​ ಎಂಜಿನಿಯರಿಂಗ್ ಅಭ್ಯರ್ಥಿಗಳು GATEನಲ್ಲಿ ಪಡೆದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.ಇಬ್ಬರು ಅಭ್ಯರ್ಥಿಗಳ GATE ಶೇಕಡಾವಾರು ಅಂಕಗಳು ಒಂದೇ ಆಗಿದ್ದರೆ, ವಯಸ್ಸಿನ ಪ್ರಕಾರ ಹಿರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಪೋಸ್ಟಿಂಗ್ ನೀಡಲಾಗುತ್ತದೆ.
Published by:Latha CG
First published: