Sakala Mission Karnataka Recruitment 2022: ಸಕಾಲ ಮಿಷನ್ ಕರ್ನಾಟಕ(Sakala Mission Karnataka) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯ ಮಾಹಿತಿ ತಂತ್ರಜ್ಞಾನ ಸಲಹೆಗಾರ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ(Golden Opportunity). ಅಭ್ಯರ್ಥಿಗಳು ಫೆಬ್ರವರಿ 1 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ sakala.kar.nic.in ಗೆ ಭೇಟಿ ನೀಡಿ. ಫೆಬ್ರವರಿ 7ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ(Walk-in-Interview) ನಡೆಯಲಿದ್ದು, ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಸಕಾಲ ಮಿಷನ್ ಕರ್ನಾಟಕ |
ಹುದ್ದೆಯ ಹೆಸರು |
ರಾಜ್ಯ ಮಾಹಿತಿ ತಂತ್ರಜ್ಞಾನ ಸಲಹೆಗಾರ |
ವಿದ್ಯಾರ್ಹತೆ |
ಬಿಇ, ಎಂಟೆಕ್ |
ಉದ್ಯೋಗದ ಸ್ಥಳ |
ಬೆಂಗಳೂರು |
ವೇತನ |
ಮಾಸಿಕ ₹ 1,40,937 |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
25/01/2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
01/02/2022 |
ಸಂದರ್ಶನ ನಡೆಯುವ ದಿನಾಂಕ |
07/02/2022 |
ವಿದ್ಯಾರ್ಹತೆ:
ಸಕಾಲ ಮಿಷನ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ರಾಜ್ಯ ಮಾಹಿತಿ ತಂತ್ರಜ್ಞಾನ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ B.E (ಕಂಪ್ಯೂಟರ್ ಸೈನ್ಸ್) ಅಥವಾ ಎಂ.ಟೆಕ್ ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Banking Jobs: ಕರ್ನಾಟಕ ಬ್ಯಾಂಕ್ನಲ್ಲಿ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ವೇತನ:
ಸಕಾಲ ಮಿಷನ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ರಾಜ್ಯ ಮಾಹಿತಿ ತಂತ್ರಜ್ಞಾನ ಸಲಹೆಗಾರ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 1,40,937 ವೇತನ ನೀಡಲಾಗುತ್ತದೆ.
ಅನುಭವ:
ಸಕಾಲ ಮಿಷನ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ರಾಜ್ಯ ಮಾಹಿತಿ ತಂತ್ರಜ್ಞಾನ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡೆವಲಪ್ಮೆಂಟ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ & ಕೋಆರ್ಡಿನೇಷನ್ನಲ್ಲಿ ಕನಿಷ್ಠ 5 ವರ್ಷ ಅನುಭವ ಹೊಂದಿರಬೇಕು.
ವಯೋಮಿತಿ:
ಸಕಾಲ ಮಿಷನ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ರಾಜ್ಯ ಮಾಹಿತಿ ತಂತ್ರಜ್ಞಾನ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ
ಸಕಾಲ ಮಿಷನ್ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಇದನ್ನೂ ಓದಿ: EPFO Recruitment 2022: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ, ಫೆ.2 ಕೊನೆಯ ದಿನಾಂಕ, ಈಗಲೇ Apply ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 25/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 1/02/2022
ಸಂದರ್ಶನ ನಡೆಯುವ ದಿನಾಂಕ: 07/02/2022
ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಸಂದರ್ಶನ ನಡೆಯುವ ಸ್ಥಳ:
ಕೊಠಡಿ ಸಂಖ್ಯೆ- 104
ಮೊದಲನೇ ಮಹಡಿ
ಗೇಟ್-1
ಎಂ.ಎಸ್.ಬಿಲ್ಡಿಂಗ್
ಬೆಂಗಳೂರು-560001
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ