• Home
  • »
  • News
  • »
  • jobs
  • »
  • SBI PO Recruitment 2022: ಎಸ್​ಬಿಐನಲ್ಲಿ 1673ಪಿಒ ಹುದ್ದೆಗೆ ಅರ್ಜಿ ಸಲ್ಲಿಕೆಗೆ ನಾಳೆ ಕೊನೆ ದಿನ

SBI PO Recruitment 2022: ಎಸ್​ಬಿಐನಲ್ಲಿ 1673ಪಿಒ ಹುದ್ದೆಗೆ ಅರ್ಜಿ ಸಲ್ಲಿಕೆಗೆ ನಾಳೆ ಕೊನೆ ದಿನ

ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಿ

ಈ ಹುದ್ದೆಗಳಲ್ಲಿ 73 ಬ್ಯಾಕ್​ಲಾಗ್​ ಹುದ್ದೆಗಳಾಗಿದ್ದು, ಉಳಿದ 1600 ಹುದ್ದೆಗಳು ಸಾಮಾನ್ಯವಾಗಿವೆ

  • Share this:

    ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ (State Bank Of India) ಬೃಹತ್​ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 1673 ಪ್ರೋಬೇಷನರಿ ಆಫೀಸರ್ (Probationary Officer)​ ಹುದ್ದೆಗಳಿಗೆ ಚಾಲನೆ ನೀಡಲಾಗಿದ್ದು, ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್​ ವಲಯದಲ್ಲಿ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಯನ್ನು ಆನ್​ಲೈನ್​ ಮೂಲಕ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಅಕ್ಟೋಬರ್​​ 12 ಆಗಿದೆ.


    ಈ ಹುದ್ದೆಗಳಲ್ಲಿ 73 ಬ್ಯಾಕ್​ಲಾಗ್​ ಹುದ್ದೆಗಳಾಗಿದ್ದು, ಉಳಿದ 1600 ಹುದ್ದೆಗಳು ಸಾಮಾನ್ಯವಾಗಿವೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.


    ಹುದ್ದೆ ಮಾಹಿತಿಹುದ್ದೆ ವಿವರ
    ಬ್ಯಾಂಕ್ ಹೆಸರುಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
    ಹುದ್ದೆಯ ಹೆಸರು:ಪ್ರೊಬೇಷನರಿ ಅಧಿಕಾರಿಗಳು (PO)
    ಹುದ್ದೆಗಳ ಸಂಖ್ಯೆ1673
    ಉದ್ಯೋಗ ಸ್ಥಳಅಖಿಲ ಭಾರತ
    ವೇತನ36000-63840 ರೂ ಮಾಸಿಕ


    ಶೈಕ್ಷಣಿಕ ಅರ್ಹತೆ:  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನು ಓದಿ: ಡ್ರಗ್​ ಇನ್ಸ್​ಪೆಕ್ಟರ್​ ಹುದ್ದೆ ನೇಮಕಾತಿ; ಇಲ್ಲಿದೆ ವಿವರ

     ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 30 ವರ್ಷಗಳನ್ನು ಹೊಂದಿರಬೇಕು.


    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು



    ಅರ್ಜಿ ಸಲ್ಲಿಕೆ: ಆನ್​ಲೈನ್​


    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 750 ರೂ.


    ಪಾವತಿ ವಿಧಾನ: ಆನ್‌ಲೈನ್


    ಆಯ್ಕೆ ಪ್ರಕ್ರಿಯೆ:
    ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ ಮತ್ತು ಸಂದರ್ಶನ


    ಇದನ್ನು ಓದಿ:  ಡಾಟಾ ಎಂಟ್ರಿ ಆಪರೇಟರ್​ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು


    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 12 ಅಕ್ಟೋಬರ್​ 2022


    ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: sbi.co.in


    ಅರ್ಜಿ ಸಲ್ಲಿಕೆ ಪ್ರಕ್ರಿಯೆ 


    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.


    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.


    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.


    -ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ. ಅದರ ಮಾಹಿತಿ ಅಪ್​ಲೋಡ್​ ಮಾಡಿ


    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ


    Published by:Seema R
    First published: