SBI Recruitment 2021: ತಿಂಗಳಿಗೆ ₹ 63,840 ಸಂಬಳ, ಸ್ಟೇಟ್ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಉದ್ಯೋಗ

ಡಿಸೆಂಬರ್ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

SBI

SBI

  • Share this:
SBI Recruitment 2021: ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾ(State Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1226 ಸರ್ಕಲ್ ಬೇಸ್ಡ್​ ಆಫೀಸರ್(Circle Based Officer) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಉದ್ಯೋಗಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ಎಸ್​ಬಿಐನ ಅಧಿಕೃತ ವೆಬ್​ಸೈಟ್​ sbi.co.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಇದನ್ನೂ ಓದಿ: KPSC ನೇಮಕಾತಿ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ತಿಂಗಳಿಗೆ ₹ 82,400 ಸಂಬಳ







































ಸಂಸ್ಥೆಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಯ ಹೆಸರುಸರ್ಕಲ್ ಬೇಸ್ಡ್​ ಆಫೀಸರ್
ಹುದ್ದೆಗಳು ಸಂಖ್ಯೆ1226
ವಿದ್ಯಾರ್ಹತೆಯಾವುದೇ ಪದವಿ
ಉದ್ಯೋಗದ ಸ್ಥಳಭಾರತ
ವೇತನಮಾಸಿಕ ₹ 36,000-63,840
ಅರ್ಜಿ ಸಲ್ಲಿಸುವ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ09/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ29/12/2021



ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29/12/2021

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/EWS- 750 ರೂ. ಅರ್ಜಿ ಶುಲ್ಕ
SC/ST/ PWD- ಯಾವುದೇ ಅರ್ಜಿ ಶುಲ್ಕ ಇಲ್ಲ.

ವಿದ್ಯಾರ್ಹತೆ:
ಸರ್ಕಲ್ ಬೇಸ್ಡ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ಇದನ್ನೂ ಓದಿ: Government Job: ಪೋಸ್ಟ್ ಆಫೀಸ್​​ನಲ್ಲಿ ಕೆಲಸ ಖಾಲಿ ಇದೆ, SSLC, PUC ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

ವಯೋಮಿತಿ:
ಸರ್ಕಲ್ ಬೇಸ್ಡ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು.

ವೇತನ:
ಸರ್ಕಲ್ ಬೇಸ್ಡ್​ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 36,000-63,840 ವೇತನ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಆನ್​ಲೈನ್​ ಟೆಸ್ಟ್
ಸ್ಕ್ರೀನಿಂಗ್
ವೈಯಕ್ತಿಕ ಸಂದರ್ಶನ
Published by:Latha CG
First published: