SBI JA Recruitment 2022: ಎಸ್​ಬಿಐನಲ್ಲಿ 5008 ಜೆಎ ನೇಮಕಕ್ಕೆ ಅರ್ಜಿ ಆಹ್ವಾನ; ಕರ್ನಾಟಕಕ್ಕೆ 316 ಹುದ್ದೆ

SBI JA Recruitment 2022: ಕರ್ನಾಟಕಕ್ಕೆ 316 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಈ ಮೂಲಕ ಬ್ಯಾಂಕಿಂಗ್​ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಪದವೀಧರ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ ನೀಡಲಾಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಿಂದ (State Bank Of India) 5008 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್​ ಸಪೋರ್ಟ್​ ಅಂಡ್​ ಸೇಲ್ಸ್​​)ನಲ್ಲಿ ಈ ಪ್ರಮಾಣದ ನೇಮಕಾತಿಗೆ ಅರ್ಜಿ ಹೊರಡಿಸಲಾಗಿದೆ. ದೇಶಾದ್ಯಂತ ಈ ನೇಮಕಾತಿ ನಡೆಯಲಿದೆ. ಇನ್ನು ಕರ್ನಾಟಕಕ್ಕೆ 316 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಈ ಮೂಲಕ ಬ್ಯಾಂಕಿಂಗ್​ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಪದವೀಧರ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ ನೀಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 27 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಬ್ಯಾಂಕ್ ಹೆಸರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
    ಹುದ್ದೆಯ ಹೆಸರು: ಜೂನಿಯರ್ ಅಸೋಸಿಯೇಟ್ಸ್ (ಗ್ರಾಹಕ ಬೆಂಬಲ ಮತ್ತು ಮಾರಾಟ)
    ಹುದ್ದೆಗಳ ಸಂಖ್ಯೆ: 5008
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 17900-47920 ರೂ. ಪ್ರತಿ ತಿಂಗಳು















    ಹುದ್ದೆ ಮಾಹಿತಿಹುದ್ದೆ ಸಂಖ್ಯೆ
    ಒಟ್ಟು ಹುದ್ದೆ5008
    ಕರ್ನಾಟಕ316

    ಶೈಕ್ಷಣಿಕ ಅರ್ಹತೆ: ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.

    ವಯಸ್ಸಿನ ಮಿತಿ:  ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷ
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಇದನ್ನು ಓದಿ: ಡಿಆರ್​ಡಿಒದಲ್ಲಿ 1901 ಹುದ್ದೆಗೆ ಅರ್ಜಿ ಆಹ್ವಾನ; ಇಲ್ಲಿದೆ ನೇಮಕಾತಿ ಸಂಪೂರ್ಣ ಮಾಹಿತಿ

    ಅರ್ಜಿ ಶುಲ್ಕ:
    ಸಾಮಾನ್ಯ, ಒಬಿಸಿ: 750 ರೂ
    ಪ.ಜಾ, ಪ.ಪಂ ಮತ್ತು ವಿಕಲಚೇತನ: ಶುಲ್ಕ ವಿನಾಯಿತಿ

    ಆಯ್ಕೆ ಪ್ರಕ್ರಿಯೆ:
    ಪೂರ್ವಭಾವಿ ಪರೀಕ್ಷೆ
    ಮುಖ್ಯ ಪರೀಕ್ಷೆ
    ಆಬ್ಜೆಕ್ಟಿವ್ ಪರೀಕ್ಷೆಗಳಲ್ಲಿ ತಪ್ಪು ಉತ್ತರಗಳಿಗೆ ಋಣಾತ್ಮಕ ಅಂಕಗಳಿರುತ್ತವೆ.

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 07 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಸೆಪ್ಟೆಂಬರ್​​2022
    ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 27 ಸೆಪ್ಟೆಂಬರ್​​2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: sbi.co.in

    ಇದನ್ನು ಓದಿ: ಬ್ಯಾಂಕ್​ ಆಫ್​ ಬರೋಡದಲ್ಲಿ ನೇಮಕಾತಿ; ಮೈಸೂರಿನಲ್ಲಿ ಉದ್ಯೋಗ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ಇತ್ಯಾದಿ ದಾಖಲೆಗಳನ್ನು ಅರ್ಜಿಯಲ್ಲಿ ದಾಖಲಿಸಿ

    -ಅನ್ವಯಿಸಿದರೆ, ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: