SEBI Recruitment 2022: ಸೆಬಿಯಲ್ಲಿ A ಗ್ರೇಡ್​ ಆಫೀಸರ್ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 55,600

ಜನವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

SEBI

SEBI

  • Share this:
ಸೆಕ್ಯುರಿಟಿ & ಎಕ್ಸ್​ಚೇಂಜ್ ಬೋರ್ಡ್​ ಆಫ್ ಇಂಡಿಯಾ ( The Security and Exchange Board of India- SEBI) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 120 ಆಫೀಸರ್ ಗ್ರೇಡ್​ ಎ(ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 5ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 24 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ www.sebi.gov.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಸೆಕ್ಯುರಿಟಿ & ಎಕ್ಸ್​ಚೇಂಜ್ ಬೋರ್ಡ್​ ಆಫ್ ಇಂಡಿಯಾ- SEBI
ಹುದ್ದೆಯ ಹೆಸರುಆಫೀಸರ್ ಗ್ರೇಡ್​ ಎ
ಒಟ್ಟು ಹುದ್ದೆಗಳು120
ವಿದ್ಯಾರ್ಹತೆಬಿಇ, ಬಿ.ಟೆಕ್​, ಎಲ್​ಎಲ್​ಬಿ, ಸಿಎ, ಎಂಎಸ್ಸಿ, ಎಂಎ, ಎಂಕಾಂ, ಎಂಸಿಎ, ಪದವಿ, ಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ವೇತನಮಾಸಿಕ ₹ 28,150-55,600
ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ05/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ24/01/2022



ಇದನ್ನೂ ಓದಿ: Banking Jobs: ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ RBI, ಪದವೀಧರರು ಅರ್ಜಿ ಸಲ್ಲಿಸಿ

ಹುದ್ದೆಯ ಮಾಹಿತಿ:
ಜನರಲ್ -80
ಲೀಗಲ್-16
ಇನ್ಫರ್ಮೇಶನ್ ಟೆಕ್ನಾಲಜಿ-14
ರಿಸರ್ಚ್-07
ಅಧಿಕೃತ ಭಾಷೆ-03
ಒಟ್ಟು 130 ಹುದ್ದೆಗಳು

ವಿದ್ಯಾರ್ಹತೆ:
ಆಫೀಸರ್ ಗ್ರೇಡ್​ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್​, ಎಲ್​ಎಲ್​ಬಿ, ಸಿಎ, ಎಂಎಸ್ಸಿ, ಎಂಎ, ಎಂಕಾಂ, ಎಂಸಿಎ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 05/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24/01/2022

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ/EWS- 1000 ರೂ.
SC/ST/PWD-100 ರೂ.

ವಯೋಮಿತಿ:
ಆಫೀಸರ್ ಗ್ರೇಡ್​ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ಆಫೀಸರ್ ಗ್ರೇಡ್​ ಎ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನೂ ಓದಿ: JOBS: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್​ನಲ್ಲಿ ಕೆಲಸ ಖಾಲಿ ಇದೆ, ಮಾಸಿಕ ವೇತನ ₹ 25,000

ವೇತನ:
ಆಫೀಸರ್ ಗ್ರೇಡ್​ ಎ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 28,150-55,600 ವೇತನ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಆನ್​ಲೈನ್​ ಪರೀಕ್ಷೆ(ಹಂತ-1,2)
ವೈಯಕ್ತಿಕ ಸಂದರ್ಶನ
Published by:Latha CG
First published: