HOME » NEWS » Jobs » SECL RECRUITMENT 2021 FOR 428 OPERATOR POSTS HG

428 ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 8ನೇ ತರಗತಿ ಪಾಸಾದವರಿಗೆ ಅವಕಾಶ!

SECL recruitment 2021: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

news18-kannada
Updated:June 22, 2021, 11:31 AM IST
428 ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 8ನೇ ತರಗತಿ ಪಾಸಾದವರಿಗೆ ಅವಕಾಶ!
ಪ್ರಾತಿನಿಧಿಕ ಚಿತ್ರ.
  • Share this:
ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (ಎಸ್‌ಇಸಿಎಲ್) ನಲ್ಲಿ ಖಾಲಿ ಇರುವ 428 ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದ್ದು,  ಜುಲೈ 7ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದೆ

ವಿದ್ಯಾರ್ಹತೆ: ಸೂಕ್ತ ವಯಸ್ಸಿನ ಆಧಾರದ ಮೇಲೆ 8 ಮತ್ತು 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ secineecell@gmail.com, pernee.secl@coalindia.in ವಿಳಾಸಕ್ಕೆ ಮೇಲ್ ಮಾಡಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 7,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯ ಸ್ಕ್ಯಾನ್ಡ್ ಕಾಪಿ ಜುಲೈ 14,2021ರೊಳಗೆ  ಕಚೇರಿಗೆ ತಲುಪಿಸಬೇಕಿರುತ್ತದೆ.
Published by: Harshith AS
First published: June 22, 2021, 11:17 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories