ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (Shimoga District Court) ಘಟಕದ ವಿವಿಧ ಕೋರ್ಟ್ನಲ್ಲಿ ಟೈಪಿಸ್ಟ್ (Typist) ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನಾಲ್ಕು ಶೀಘ್ರ ಲಿಪಿಕಾರ ಹುದ್ದೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 27 ಆಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಪಾವತಿ ಮಾಡಲು ಕಡೆಯ ದಿನಾಂಕ ಜುಲೈ 28 ಆಗಿದೆ
ಹುದ್ದೆ ಮಾಹಿತಿ | ಹುದ್ದೆ ವಿವರ |
ಸಂಸ್ಥೆ | ಶಿವಮೊಗ್ಗ ಜಿಲ್ಲಾ ನ್ಯಾಯಾಲಯ |
ಹುದ್ದೆ | ಶೀಘ್ರ ಲಿಪಿಗಾರ |
ಹುದ್ದೆಗಳ ಸಂಖ್ಯೆ | 4 |
ಕಾರ್ಯ ನಿರ್ವಹಣೆ ಸ್ಥಳ | ಶಿವಮೊಗ್ಗ |
ವೇತನ | 27650-52650 ರೂ ಮಾಸಿಕ |
ವಯಸ್ಸಿನ ಮಿತಿ: ಶಿವಮೊಗ್ಗ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯುಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯಸ್ಸಿನ ಸಡಿಲಿಕೆ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಪ್ರವರ್ಗ 1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 03 ವರ್ಷಗಳು
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಹಾಗೂ ಪ್ರವರ್ಗ 1 ಅಭ್ಯರ್ಥಿಗಳು: ಶುಲ್ಕ ವಿನಾಯಿತಿ ನೀಡಲಾಗಿದೆ.
ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 100 ರೂ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100 ರೂ
ಪಾವತಿ ವಿಧಾನ: ಆನ್ಲೈನ್ ಅಥವಾ ಚಲನ್
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ, ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಜೂನ್ 29, 2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27 ಜುಲೈ 2022
ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 28 ಜುಲೈ 2022
ಅಧಿಸೂಚನೆ ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: districts.ecourts.gov.in
ಅರ್ಜಿ ಸಲ್ಲಿಕೆ ವಿಧಾನ (How To Apply)
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ