ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ(Shimoga District Court) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 7 ಪ್ರೊಸೆಸ್ ಸರ್ವರ್(Process Server) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(Process Server) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನಾಂಕ(Last Date)ವಾಗಿದೆ. ನವೆಂಬರ್ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್
https://districts.ecourts.gov.in/shivamogga-onlinerecruitment ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಶಿವಮೊಗ್ಗ ಜಿಲ್ಲಾ ನ್ಯಾಯಾಲಯ |
ಹುದ್ದೆಯ ಹೆಸರು |
ಪ್ರೊಸೆಸ್ ಸರ್ವರ್ |
ಒಟ್ಟು ಹುದ್ದೆಗಳು |
07 |
ವಿದ್ಯಾರ್ಹತೆ |
SSLC ಪಾಸ್ |
ಉದ್ಯೋಗದ ಸ್ಥಳ |
ಶಿವಮೊಗ್ಗ |
ವೇತನ |
ಮಾಸಿಕ ₹ 19,950-37,900 |
ಅರ್ಜಿ ಸಲ್ಲಿಕೆ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
23/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
30/12/2021 |
ಹುದ್ದೆಯ ಮಾಹಿತಿ:
ಪ್ರೊಸೆಸ್ ಸರ್ವರ್- 07 ಹುದ್ದೆಗಳು
ಸಾಮಾನ್ಯ-3
ಪರಿಶಿಷ್ಟ ಜಾತಿ(SC)- 1
ಪ್ರವರ್ಗ 2ಎ-1
ಪ್ರವರ್ಗ 2ಬಿ- 1
ಪ್ರವರ್ಗ 3ಬಿ-1
ವಿದ್ಯಾರ್ಹತೆ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ ಶಿಕ್ಷಣ ಸಂಸ್ಥೆಯಿಂದ ಕಡ್ಡಾಯವಾಗಿ SSLC ಪಾಸಾಗಿರಬೇಕು. ಜೊತೆಗೆ ವಾಹನ ಚಾಲನೆಯ ಪರವಾನಗಿ(ಲೈಸೆನ್ಸ್) ಇರುವವರಿಗೆ ಆದ್ಯತೆ ನೀಡಲಾಗುತ್ತದೆ.
ಇದನ್ನೂ ಓದಿ: UPPSC Recruitment 2021: ಮಾಸಿಕ ವೇತನ ₹ 1,77,500; UPPSCಯಲ್ಲಿ ವಿವಿಧ ಹುದ್ದೆಗಳು ಖಾಲಿ
ವಯೋಮಿತಿ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಈ ಕೆಳಕಂಡಂತೆ ಇರಬೇಕು.
ಸಾಮಾನ್ಯ ವರ್ಗ- 35 ವರ್ಷ
2ಎ, 2ಬಿ, 3ಎ, 3ಬಿ- 38 ವರ್ಷ
SC/ST-40 ವರ್ಷ
ವಿಧವೆಯರಿಗೆ ಹಾಗೂ ಅಂಗವಿಕಲರಿಗೆ 10 ವರ್ಷಗಳ ಸಡಿಲಿಕೆ ನೀಡಲಾಗುತ್ತದೆ. ಜೊತೆಗೆ ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ಹೀಗಿದೆ.
ಇದನ್ನೂ ಓದಿ: Police Recruitment 2021: ತಿಂಗಳಿಗೆ ₹ 22,000 ಸಂಬಳ, ಡಿಪ್ಲೋಮಾ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ
ಸಾಮಾನ್ಯ ವರ್ಗ- 200 ರೂ.
2ಎ, 2ಬಿ, 3ಎ, 3ಬಿ- 100 ರೂ.
SC/ST , ಪ್ರವರ್ಗ1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ನ್ಯಾಯಾಲಯದ ವೆಬ್ಸೈಟ್
https://districts.ecourts.gov.in/shivamogga-onlinerecruitment ರಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI)ದ State Bank Collect ಮೂಲಕ ಆನ್ಲೈನ್ ಮೂಲಕ ಪಾವತಿಸಬೇಕು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯಲ್ಲಿ ಕೊಡಲಾಗಿರುವ ಸೂಚನೆಗಳನ್ನು ಓದಿ,
ಇಲ್ಲಿ ಕ್ಲಿಕ್ ಮಾಡಿ.
ವೇತನ:
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಪ್ರೊಸೆಸ್ ಸರ್ವರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 19,950-37,900 ವೇತನ ನೀಡಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ