South Central Railway Recruitment 2021: ದಕ್ಷಿಣ ಮಧ್ಯೆ ರೈಲ್ವೆ(South Central Railway ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 81 ಜೂನಿಯರ್ ಎಂಜಿನಿಯರ್(Junior Engineer) ಹುದ್ದೆಗಳು ಖಾಲಿ ಇದ್ದು, ಬಿಇ(BE), ಬಿಎಸ್ಸಿ(B. Sc), ಡಿಪ್ಲೋಮಾ(Diploma) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಮಧ್ಯೆ ರೈಲ್ವೆಯ ಅಧಿಕೃತ ವೆಬ್ಸೈಟ್ scr.indianrailways.gov.in ಗೆ ಭೇಟಿ ನೀಡಬಹುದಾಗಿದೆ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ದಕ್ಷಿಣ ಮಧ್ಯೆ ರೈಲ್ವೆ |
ಹುದ್ದೆಯ ಹೆಸರು |
ಜೂನಿಯರ್ ಎಂಜಿನಿಯರ್ |
ಒಟ್ಟು ಹುದ್ದೆಗಳು |
81 |
ವಿದ್ಯಾರ್ಹತೆ |
ಬಿಇ, ಬಿಎಸ್ಸಿ, ಡಿಪ್ಲೋಮಾ |
ಉದ್ಯೋಗದ ಸ್ಥಳ |
ಸಿಕಂದರಾಬಾದ್ |
ವೇತನ |
ನಿಯಮಾನುಸಾರ |
ಅರ್ಜಿ ಸಲ್ಲಿಸುವ ವಿಧಾನ |
ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
17/11/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
16/12/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16/12/2021
ಇದನ್ನೂ ಓದಿ:KRCL Recruitment 2021: ಮಾಸಿಕ ವೇತನ ₹ 30,000, ಕೊಂಕಣ ರೈಲ್ವೆಯಲ್ಲಿ BE, B Tech ಪಾಸಾದವರಿಗೆ ಉದ್ಯೋಗ
ವಿದ್ಯಾರ್ಹತೆ:
ದಕ್ಷಿಣ ಮಧ್ಯೆ ರೈಲ್ವೆಯಲ್ಲಿ ಖಾಲಿ ಇರುವ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ 3 ವರ್ಷಗಳ ಡಿಪ್ಲೋಮಾ(ಸಿವಿಲ್ ಎಂಜಿನಿಯರಿಂಗ್) ಅಥವಾ ಬಿಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಸಾಮಾನ್ಯ ವರ್ಗ- 42 ವರ್ಷ
ಒಬಿಸಿ- 45 ವರ್ಷ
SC/ST- 47 ವರ್ಷ
ವೇತನ:
ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಇದನ್ನೂ ಓದಿ: India Post Recruitment 2021: PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ; ಮಾಸಿಕ ವೇತನ ₹ 81,100
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ