ಸೌತ್ ಈಸ್ಟರ್ನ್ ರೈಲ್ವೆ(ಆಗ್ನೇಯ ರೈಲ್ವೆ) (South Eastern Railway)ಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಸೀನಿಯರ್ ಇನ್ಸ್ಟ್ರಕ್ಟರ್(Senior Instructor) ಹಾಗೂ ಜೂನಿಯರ್ ಇನ್ಸ್ಟ್ರಕ್ಟರ್(Junior Instructor) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿ ಅರ್ಜಿ ಸಲ್ಲಿಸಬಹುದಾಗಿದೆ. ಸ್ನಾತಕೋತ್ತರ ಪದವಿ(Master's Degree) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಆಫ್ಲೈನ್(ಪೋಸ್ಟ್)(Offline) ಮೂಲಕ ನವೆಂಬರ್ 18ರವರೆಗೆ ಅರ್ಜಿ ಹಾಕಬಹುದಾಗಿದೆ. ಅಕ್ಟೋಬರ್ 21ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಆಗ್ನೇಯ ರೈಲ್ವೆಯ ಅಧಿಕೃತ ವೆಬ್ಸೈಟ್ ser.indianrailways.gov.in ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ |
ಆಗ್ನೇಯ ರೈಲ್ವೆ |
ಹುದ್ದೆಯ ಹೆಸರು |
ಸೀನಿಯರ್ ಇನ್ಸ್ಟ್ರಕ್ಟರ್, ಜೂನಿಯರ್ ಇನ್ಸ್ಟ್ರಕ್ಟರ್ |
ಒಟ್ಟು ಹುದ್ದೆಗಳು |
11 |
ವಿದ್ಯಾರ್ಹತೆ |
ಸ್ನಾತಕೋತ್ತರ ಪದವಿ |
ಕೆಲಸದ ಸ್ಥಳ |
ಖರಗ್ಪುರ |
ಸಂಬಳ |
ಮಾಸಿಕ ₹9,300-34,800 |
ಅರ್ಜಿ ಸಲ್ಲಿಸುವ ವಿಧಾನ |
ಆಫ್ಲೈನ್(ಪೋಸ್ಟಲ್) |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ |
21/10/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
18/11/2021 |
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/11/2021
ಇದನ್ನೂ ಓದಿ: Karnataka High Court Recruitment 2021: ತಿಂಗಳಿಗೆ ₹ 63,070 ಸಂಬಳ; 21 ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅಧಿಸೂಚನೆ ಪ್ರಕಟ
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 55 ವರ್ಷ ಇರಬೇಕು.
ವೇತನ:
ಸೀನಿಯರ್ ಇನ್ಸ್ಟ್ರಕ್ಟರ್ ಹಾಗೂ ಜೂನಿಯರ್ ಇನ್ಸ್ಟ್ರಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಾಸಿಕ ₹9,300-34,800 ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಆಯ್ಕೆಯಾದ ಅಭ್ಯರ್ಥಿಯನ್ನು ಪಶ್ಚಿಮ ಬಂಗಾಳದ ಖರಗ್ಪುರದಲ್ಲಿ ಕೆಲಸಕ್ಕೆ ನೇಮಿಸಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಇದನ್ನೂ ಓದಿ: Southern Railway Recruitment 2021: ಪಿಯುಸಿ ಪಾಸಾದವರಿಗೆ ದಕ್ಷಿಣ ರೈಲ್ವೆಯಲ್ಲಿ ಉದ್ಯೋಗ; ಮಾಸಿಕ ವೇತನ ₹ 30,000
ಅರ್ಜಿ ಸಲ್ಲಿಸುವ ಬಗೆ:
- ಮೊದಲಿಗೆ ಸೌತ್ ಈಸ್ಟರ್ನ್ ರೈಲ್ವೆಯ ಅಧಿಕೃತ ವೆಬ್ಸೈಟ್ ser.indianrailways.gov.in ಗೆ ಭೇಟಿ ನೀಡಬೇಕು.
- ಅಲ್ಲಿ ಕಾಣಸಿಗುವ “Recruitment/ Career/ Advertisement menu” ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಖಾಲಿ ಇರುವ ಹುದ್ದೆಗಳ ನೋಟಿಫಿಕೇಶನ್ಗಾಗಿ ಸರ್ಚ್ ಮಾಡಿ, ಅದರ ಮೇಲೆ ಕ್ಲಿಕ್ ಮಾಡಿ.
- ಅಧಿಕೃತ ನೋಟಿಫಿಕೇಶನ್ನ ಲಿಂಕ್ನ್ನು ಡೌನ್ಲೋಡ್ ಮಾಡಿಕೊಳ್ಳಿ.
- ನೋಟಿಫಿಕೇಶನ್ನಲ್ಲಿ ನೀಡಲಾಗಿರುವ ಎಲ್ಲಾ ಸೂಚನೆಗಳನ್ನು ಸರಿಯಾಗಿ ಓದಿ.
- ಕೆಳಗೆ ನೀಡಲಾಗಿರುವ Official Online Apply/ Registration ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಅಗತ್ಯ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ
- ಕೇಳಿರುವ ಎಲ್ಲಾ ಅಗತ್ಯ ದಾಖಲೆಗಳನ್ನು ಸರಿಯಾದ ಫಾರ್ಮ್ಯಾಟ್ ಹಾಗೂ ಸೈಜಿನಲ್ಲಿ ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಎಲ್ಲಾ ಮಾಹಿತಿ ಸರಿಯಾಗಿದೆಯೇ ಎಂದು ಪರಿಶೀಲಿಸಿ, ಸಬ್ಮಿಟ್ ಕೊಡಿ.
- ಬಳಿಕ ಸಂಸ್ಥೆ ಅರ್ಜಿ ಶುಲ್ಕ ಕೇಳಿದ್ದರೆ, ಪಾವತಿಸಿ.
- ಕೊನೆಯಲ್ಲಿ ಅರ್ಜಿಯನ್ನು ಸಬ್ಮಿಟ್ ಮಾಡಿ, ಒಂದು ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ