SAI Recruitment: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿದೆ ಉದ್ಯೋಗಾವಕಾಶ; ಇಲ್ಲಿದೆ ಸಂಪೂರ್ಣ ಮಾಹಿತಿ

ಭಾರತೀಯ ಕ್ರೀಡಾ ಪ್ರಾಧಿಕಾರ ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲು ಮುಂದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿ ಇಲ್ಲಿದೆ

ಬೇಗ ಅರ್ಜಿ ಹಾಕಿ

ಬೇಗ ಅರ್ಜಿ ಹಾಕಿ

  • Share this:
    ಭಾರತೀಯ ಕ್ರೀಡಾ ಪ್ರಾಧಿಕಾರದಿಂದ (Sports Authority of India) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 118 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್ (High Performance Analyst) ಹುದ್ದೆಗಳ ನೇಮಕಾತಿಗೆ ಮುಂದಾಗಲಾಗಿದೆ. ಕೇಂದ್ರ ಸರ್ಕಾರದ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 5 ಆಗಿದೆ.

    ಭಾರತೀಯ ಕ್ರೀಡಾ ಪ್ರಾಧಿಕಾರ ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲು ಮುಂದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ)
    ಹುದ್ದೆಯ ಹೆಸರು: ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್
    ಹುದ್ದೆಗಳ ಸಂಖ್ಯೆ: 138
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 105000 ರೂ. ಪ್ರತಿ ತಿಂಗಳು











































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಫಿಸಿಯೋ ಥೆರಪಿಸ್ಟ್​​42ಫಿಸಿಯೋ ಥೆರಪಿಸ್ಟ್​ನಲ್ಲಿ ಪದವಿ
    ಸ್ಟ್ರೇಂಥನ್​ ಮತ್ತು ಕಂಡೀಷನಿಂಗ್ ತಜ್ಞರು42ಕ್ರೀಡಾ ತರಬೇತಿಯಲ್ಲಿ ಡಿಪ್ಲೊಮಾ, ದೈಹಿಕ ಶಿಕ್ಷಣದ ಪದವಿ
    ಫಿಸಿಯಾಲಾಜಿಸ್ಟ್​​13ಜೈವಿಕ ವಿಜ್ಞಾನಗಳಲ್ಲಿ ಪದವಿ
    ಮನಶ್ಶಾಸ್ತ್ರಜ್ಞ13ಮನೋವಿಜ್ಞಾನದಲ್ಲಿ ಪದವಿ
    ಬಯೋಮೆಕಾನಿಕ್ಸ್ 1313ಬಯೋಮೆಕಾನಿಕ್ಸ್‌ನಲ್ಲಿ ಪದವಿ
    ಪೌಷ್ಟಿಕ ತಜ್ಞ13ನ್ಯೂಟ್ರಿಷನ್ ಮತ್ತು ಡಯೆಟಿಕ್ಸ್/ಆಹಾರ ವಿಜ್ಞಾನ ಮತ್ತು ಪೋಷಣೆಯಲ್ಲಿ ಪದವಿ
    ಬಯೋಕೆಮಿಸ್ಟ್​2ಬಯೋಕೆಮಿಸ್ಟ್ರಿಯೊಂದಿಗೆ ಬಯೋಕೆಮಿಸ್ಟ್ರಿ/ಕೆಮಿಸ್ಟ್ರಿಯಲ್ಲಿ ಪದವಿ

    ವಯಸ್ಸಿನ ಮಿತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು  45 ವರ್ಷಗಳು ಮೀರಿರಬಾರದು.

    ಇದನ್ನು ಓದಿ: ಪದವೀಧರರಿಗೆ ಅರ್ಜಿ ಆಹ್ವಾನಿಸಿದ ಇನ್ಫೋಸಿಸ್​​; ಇಲ್ಲಿದೆ ಹುದ್ದೆ ಸಂಪೂರ್ಣ ಮಾಹಿತಿ

    ವಯೋಮಿತಿ ಸಡಿಲಿಕೆ:
    ಭಾರತೀಯ ಕ್ರೀಡಾ ಪ್ರಾಧಿಕಾರದ ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ:
    ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ

    ಆಯ್ಕೆ ಪ್ರಕ್ರಿಯೆ:
    ಮೆರಿಟ್ ಪಟ್ಟಿ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 05 ಆಗಸ್ಟ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಸೆಪ್ಟೆಂಬರ್​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: sportsauthorityofindia.nic.in

    ಇದನ್ನು ಓದಿ: ಫ್ರೆಶರ್ಸ್​ಗೆ ಎಚ್​ಪಿಯಲ್ಲಿದೆ ಉದ್ಯೋಗ; ಯಾವುದೇ ವಿಷಯದಲ್ಲಿ ಡಿಗ್ರಿ ಆಗಿದ್ರೂ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್ ನೀಡಿ. ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿದ ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: