ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ (Sports Authority of India) ಖಾಲಿ ಇರುವ 104 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಸಾಜ್ ಥೆರಪಿಸ್ಟ್ (Massage Therapist) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್ಎಸ್ಎಲ್ಸಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಕೇಂದ್ರ ಸರ್ಕಾರದ ಈ ಉದ್ಯೋಗದಲ್ಲಿ ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್ 6 ಆಗಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳನ್ನು ನಿರ್ಧಿಷ್ಟ ಸಮಯಕ್ಕೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈಗಾಗಲೇ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಮಸಾಜ್ ಥೆರಪಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳು ಈ ಹುದ್ದೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ಭಾರತೀಯ ಕ್ರೀಡಾ ಪ್ರಾಧಿಕಾರ ಹಲವು ರಾಜ್ಯಗಳಲ್ಲಿ ಹೊಂದಿರುವ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.
ಹುದ್ದೆ ಮಾಹಿತಿ | ಹುದ್ದೆ ವಿವರ |
ಸಂಸ್ಥೆ | ಭಾರತೀಯ ಕ್ರೀಡಾ ಪ್ರಾಧಿಕಾರ |
ಹುದ್ದೆ | ಮಸಾಜ್ ಥೆರಪಿಸ್ಟ್ |
ಹುದ್ದೆಗಳ ಸಂಖ್ಯೆ | 104 |
ಉದ್ಯೋಗ ಸ್ಥಳ | ದೇಶದೆಲ್ಲೆಡೆ |
ವೇತನ | 35000ರೂ. ಪ್ರತಿ ತಿಂಗಳು |
ಅನುಭವದ ವಿವರಗಳು
ಅಭ್ಯರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ: ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಭಾರತೀಯ ಕ್ರೀಡಾ ಪ್ರಾಧಿಕಾರದ ನಿಯಮಗಳ ಪ್ರಕಾರ
ಇದನ್ನು ಓದಿ: ಯಾವುದೇ ವಿಷಯದಲ್ಲಿ ಡಿಗ್ರಿ ಆದವರಿಗೆ ಚಿಕ್ಕಮಗಳೂರಿನಲ್ಲಿದೆ ಕೆಲಸ; ತಿಂಗಳಿಗೆ 35,000 ರೂ ವೇತನ
ಆಯ್ಕೆ ಪ್ರಕ್ರಿಯೆ
ಅರ್ಹತೆ, ಅನುಭವ, ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆ : ಇಮೇಲ್ ಮುಖಾಂತರ
ಇಮೇಲ್ ವಿಳಾಸ: recruitment.massagetherapist@gmail.com
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 15 ಜುಲೈ 2022
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 06 ಆಗಸ್ಟ್ 2022
ಪ್ರಮುಖ ಲಿಂಕ್ಗಳು
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: sportsauthorityofindia.nic.in
ಇದನ್ನು ಓದಿ: ಎಸ್ಎಸ್ಎಲ್ಸಿ ಆಗಿ ಕೆಲಸ ಹುಡುಕುತ್ತಿದ್ರೆ, CredR ಕಂಪನಿಯಲ್ಲಿದೆ ಉದ್ಯೋಗ
ಅರ್ಜಿ ಸಲ್ಲಿಕೆ ವಿಧಾನ
ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ಇಮೇಲ್ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
ಅರ್ಜಿ ಜೊತೆ ಕಡ್ಡಾಯವಾಗಿ ಲಗತ್ತಿಸಬೇಕಾದ ಮಾಹಿತಿ
ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿ ನಮೂನೆ ಜೊತೆ ವಯಸ್ಸಿನ ದಾಖಲೆ.
ಗುರುತಿನ ಪುರಾವೆ.
ವರ್ಗ ಪ್ರಮಾಣಪತ್ರ- ಒಬಿಸಿ, ಎಸ್ಸಿ, ಎಸ್ಟಿ
10ನೇ ತರಗತಿಯ ಅಂಕಪಟ್ಟಿ
ಅರ್ಹತಾ ದಾಖಲೆ/ಮಸಾಜ್ ಚಿಕಿತ್ಸೆಯ ಪ್ರಮಾಣಪತ್ರ
ಕೆಲಸದ ಅನುಭವದ ಪ್ರಮಾಣಪತ್ರ.
ಪ್ರಸ್ತುತ ಉದ್ಯೋಗದಾತರಿಂದ ಯಾವುದೇ ಆಕ್ಷೇಪಣೆ ಪ್ರಮಾಣಪತ್ರ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ