SSB Recruitment 2021: ಸಬ್​ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸಶಸ್ತ್ರ ಸೀಮಾ ಬಲ; ಮಾಸಿಕ ವೇತನ ₹ 1,12,400

ನವೆಂಬರ್ 10 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

SSB

SSB

  • Share this:
SSB Recruitment 2021: ಸಶಸ್ತ್ರ ಸೀಮಾ ಬಲ(Sashastra Seema Bal) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 22 ಸಬ್​ ಇನ್ಸ್​ಪೆಕ್ಟರ್(Sub Inspector) ಹುದ್ದೆಗಳು ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 10 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಆಫ್​ಲೈನ್(Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssb.nic.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಸಶಸ್ತ್ರ ಸೀಮಾ ಬಲ
ಹುದ್ದೆಯ ಹೆಸರುಸಬ್​ ಇನ್ಸ್​ಪೆಕ್ಟರ್
ಒಟ್ಟು ಹುದ್ದೆಗಳು22
ವಿದ್ಯಾರ್ಹತೆಸಂಬಂಧಿತ ಹುದ್ದೆಯಲ್ಲಿ ಕೆಲಸ ಮಾಡಿರಬೇಕು.
ಉದ್ಯೋಗದ ಸ್ಥಳನವದೆಹಲಿ
ವೇತನಮಾಸಿಕ 35,400-1,12,400
ಅರ್ಜಿ ಸಲ್ಲಿಕೆ ವಿಧಾನಆಫ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ11/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ10/12/2021



ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/10/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/12/2021

ಇದನ್ನೂ ಓದಿ: India Post Recruitment 2021:ತಿಂಗಳಿಗೆ ₹ 81,000 ಸಂಬಳ; SSLC, PUC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗ

ವಿದ್ಯಾರ್ಹತೆ:

ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದ ಪೊಲೀಸ್ ಸಂಸ್ಥೆಗಳ ಅಧಿಕಾರಿಗಳು ಪೋಷಕ ವರ್ಗ ಅಥವಾ ಇಲಾಖೆಯಲ್ಲಿ ನಿಯಮಿತ ಆಧಾರದ ಮೇಲೆ ಸಾದೃಶ್ಯದ ಹುದ್ದೆಗಳಲ್ಲಿ ಕೆಲಸ ಮಾಡಿರಬೇಕು.

ವಯೋಮಿತಿ:

ಸಬ್​ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 52 ವರ್ಷ ಮೀರಿರಬಾರದು.

ಇದನ್ನೂ ಓದಿ: Indian Air Force Recruitment 2021: ತಿಂಗಳಿಗೆ ₹ 1,77,500 ಸಂಬಳ, ಭಾರತೀಯ ವಾಯುಪಡೆಯಲ್ಲಿ BE, B Tech ಪದವೀಧರರಿಗೆ ಉದ್ಯೋಗ

ವೇತನ:

ಸಬ್​ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 35,400-​ 1,12,400 ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಇಲಾಖೆಯಲ್ಲಿ ಕೆಲಸ ಹುಡುಕುತ್ತಿದ್ದೀರಾ? ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಡೈರೆಕ್ಟೋರೇಟ್​ ಜನರಲ್
ಸಶಸ್ತ್ರ ಸೀಮಾ ಬಲ
ಈಸ್ಟ್​ ಬ್ಲಾಕ್ ವಿ
ಆರ್​.ಕೆ.ಪುರಂ
ನವದೆಹಲಿ-110066
Published by:Latha CG
First published: